Wednesday, December 17, 2025
Wednesday, December 17, 2025

Geeta Shivaraj kumar ಗೆದ್ದರೆ ಮರಾಠ ಸಮುದಾಯದವರ ಪರ ಕೆಲಸ ಮಾಡುವೆ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಎಕ್ಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು ಅವಕಾಶ ನೀಡಿದಂತಾಗುತ್ತದೆ’ ಎಂದು ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ (ಎಸ್ ಟಿ) ಘಟಕ ವತಿಯಿಂದ ಇಲ್ಲಿನ ಗೋಳಿಹೊಳೆಯ ಮಹಿಷಿಮರ್ಧಿನಿ ಸಭಾಭವನದಲ್ಲಿ ಆಯೋಜಿಸಿದ್ದ ಮರಾಠಿ ಸಮುದಾಯದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಇಲ್ಲಿ 20 ಸಾವಿರಕ್ಕೂ ಹೆಚ್ಚು ಮರಾಠಿ ಸಮುದಾಯದವರು ವಾಸವಾಗಿದ್ದಾರೆ‌. ಮರಾಠಿ ಸಮುದಾಯದವರು ಧರ್ಮ ನಿಷ್ಠರು ಹಾಗೂ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಿದ್ದಾರೆ‌. ಈ ಹಿಂದೆ ಇಲ್ಲಿ ಸಮಾಜಕ್ಕೆ ₹2 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿತ್ತು.

ಇದರಿಂದ, ಮರಾಠಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ‌ ಎಂದರು‌.

ಗೀತಾ ಶಿವರಾಜಕುಮಾರ ಅವರು ಪ್ರಮಾಣಿಕ ಹಾಗೂ ಸಾತ್ವಿಕ ಮಹಿಳೆ. ಅವರಿಗೆ ಮತ ನೀಡಿದರೆ, ಈ ಭಾಗದಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತದೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಬಿಜೆಪಿಯಿಂದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದಿಂದ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಬಿಜೆಪಿಯ ಸುಳ್ಳು ಭರವಸೆಯ ಆಡಳಿತ. ಆದ್ದರಿಂದ, ಈ ಭಾರಿ ನನಗೆ ಅವಕಾಶ ಕಲ್ಪಿಸಿಕೊಡಿ, ನನ್ನ ತಂದೆಯ ಹಾದಿಯಲ್ಲಿ ಸಾಗಿ, ಜನ ಸಮಾನ್ಯರಿಗೆ ಪೂರಕವಾದ ಆಡಳಿತ ನಡೆಸುತ್ತೇನೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಹಾಗೂ ಅಶಕ್ತರ ಕೈ ಹಿಡಿದು ನಡೆಸುತ್ತಿದೆ. ಅದೇ ರೀತಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮರಾಠಿ ಸಮುದಾಯಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಎಸ್ ಟಿ ಸಮುದಾಯದವರು ಅಪಾರ ಕೊಡುಗೆ ನೀಡಿದ್ದಾರೆ. ಈ ಲೋಕಸಭಾ ಚುನಾವಣೆ ಸಹೋದರಿ ಗೀತಾ ಅವರನ್ನು ಗೆಲ್ಲಿಸಬೇಕಿದೆ. ಕಾರಣ, ಬಹುಕಾಲ ಆಡಳಿತದ ಚುಕ್ಕಾಣಿ ಹಿಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಿಲ್ಲ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ ಪರ ಮತಯಾಚಿಸಲು ನೈತಿಕ ಹಕ್ಕಿದೆ ಎಂದರು.

Geeta Shivaraj kumar ಬೈಂದೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ್ ಮಾತನಾಡಿ, ಈ ಭಾಗದಲ್ಲಿ ಅನೇಕ ವರ್ಷದಿಂದ ತಾಲ್ಲೂಕು ಪಂಚಾಯಿತಿಯ ಅಧಿಕಾರ ಹಿಡಿಯಲು ಕೂಡ ಮರಾಠಿ ಸಮುದಾಯಕ್ಕೆ ಆಗಿಲ್ಲ. ಹಿಂದಿನಿಂದಲೂ ಸಮುದಾಯದ ಕುರಿತ ತಾರತಮ್ಯ ನಡೆಯುತ್ತಲೇ ಇದೆ. ಇದಕ್ಕೆ ಉತ್ತರವಾಗಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆರಿಸಬೇಕಿದೆ‌. ಸಮುದಾಯದ ಸಮಸ್ಯೆಗಳ ಆಹ್ವಾಲುಗಳನ್ನು ಸರ್ಕಾರದ ಮುಂದೆ ಇಡಲು ಗೀತಾ ಶಿವರಾಜಕುಮಾರ್ ಅವರು ವೇದಿಕೆ ಆಗಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಉಡುಪಿ ಎಸ್ಟಿ ಘಟಕ ಅಧ್ಯಕ್ಷ ಜೈರಾಮ ನಾಯ್ಕ್, ಶೇಷು ನಾಯ್ಕ್, ರಾಜು ಪೂಜಾರಿ, ಅನಿತಾ ಪುಟ್ಟನಾಯ್ಕ್, ಗೌರಿ ದೇವಾಡಿಗ, ಬೋಜ ನಾಯ್ಕ್, ಸಂತೋಷ ನಾಯ್ಕ್ ದುಡ್ಡಿನಗೋಳಿ, ಚಂದ್ರ ನಾಯ್ಕ್ ಮುತ್ತಣಗಿ, ನಾರಾಯಣ ನಾಯ್ಕ ಬಾಚುಕೂಳಿ ಸೇರಿ ಗಣ್ಯರು ಇದ್ದರು‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...