Thursday, September 17, 2026
Thursday, September 17, 2026

Dandeli Kali river ದಾಂಡೆಲಿಯ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ಒಂದೇ ಕುಟುಂಬದ 6 ಮಂದಿ ಮುಳುಗಿ ಸಾವು

Date:

Dandeli Kali river ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.
ಮೃತರನ್ನು 40 ವರ್ಷದ ನಜೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಎಂದು ಗುರುತಿಸಲಾಗಿದೆ.
ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದೆ. ಆಗ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.
Dandeli Kali river ಪ್ರವಾಸಕ್ಕೆಂದು ಒಟ್ಟು 8 ಮಂದಿ ತಂಡ ತೆರಳಿತ್ತು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...