Monday, February 2, 2026
Monday, February 2, 2026

Lok Sabha Election ಸೂರತ್ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ‌‌ ನಾಮಪತ್ರ ತಿರಸ್ಕೃತ, ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್

Date:

Lok Sabha Election ಗುಜರಾತ್‌ನ ಸೂರತ್‌ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ.

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಸಹಿಯಲ್ಲಿನ ವ್ಯತ್ಯಾಸದ ಕಾರಣ ನೀಡಿ ಭಾನುವಾರ ತಿರಸ್ಕರಿಸಲಾಗಿದೆ. ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ಭಾನುವಾರ ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣವನ್ನು ನೀಡಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಸೂರತ್‌ನ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ಇದೇ ಕಾರಣ ನೀಡಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Lok Sabha Election ಪಕ್ಷದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡ ಬಗ್ಗೆ ಆಕ್ರೋಶಗೊಂಡ ಕಾಂಗ್ರೆಸ್‌, ಇದರಲ್ಲಿ ಆಡಳಿತಾರೂಢ ಬಿಜೆಪಿಯ ಕೈವಾಡ ಎಂದು ಆರೋಪಿಸಿದೆ ಮತ್ತು ಕ್ಷೇತ್ರದ ಚುನಾವಣೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಚುನಾವಣೆಗಳಲ್ಲಿ ಸೋಲನ್ನು ಗ್ರಹಿಸಿ ಆತಂಕಗೊಂಡಿರುವ ಬಿಜೆಪಿಯ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿಂಹ ಗೋಹಿಲ್ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ. ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟುತ್ತೇವೆ ಎಂದು ಗೋಹಿಲ್ ಹೇಳಿದ್ದು, ಚುನಾವಣಾಧಿಕಾರಿಯು ಫೋರೆನ್ಸಿಕ್ ತಜ್ಞರ ಸಹಾಯವನ್ನು ಪಡೆಯಬೇಕು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...