K.S.Eshwarappa ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ನೇಹಾ ಹತ್ಯೆ ಖಂಡಿಸಿ ಮಹಾವೀರ ವೃತ್ತದಲ್ಲಿ ಸೋಮವಾರ ರಾಷ್ಟ್ರಭಕ್ತರ ಬಳಗದಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆಯೋ ಇಲ್ಲ ಲವ್ ಜಿಹಾದೋ ಎಂದು ತೀರ್ಮಾನ ಮಾಡುವುದು ನೀವಲ್ಲ. ಪ್ರಕರಣ ತನಿಖೆ ಸಂಸ್ಥೆಗಳಿಗೆ ವಹಿಸಿ, ಸತ್ಯ ಹೊರ ತೆಗೆಯಬೇಕು ಎಂದು ಆಗ್ರಹಿಸಿದರು.
ಹಿಂದು ಹೆಣ್ಣು ಮಕ್ಕಳನ್ನು ಕಗ್ಗೋಲೆ ಮಾಡುವುದು ರಾಕ್ಷಸ ಕೃತ್ಯ. ಸಮಾಜದ ಕೈಗೆ ಸಿಕ್ಕರೆ ತುಂಡು ತುಂಡಾಗುತ್ತಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೇಳುತ್ತೇನೆ. ಈ ರೀತಿಯ ಘಟನೆ ಮತ್ತೊಮ್ಮೆ ಸಂಭವಿಸದಂತೆ ಕಾಂಗ್ರೆಸ್ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
K.S.Eshwarappa ರಾಷ್ಟ್ರಭಕ್ತ ಬಳಗದಿಂದ ಕೆ.ಎಸ್.ಈಶ್ವರಪ್ಪ. ಪುತ್ರ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಗರದ ಜೈಲ್ ವೃತ್ತದಿಂದ ಆರಂಭಗೊಂಡು ದುರ್ಗಿಗುಡಿ ರಸ್ತೆ, ಸೀನಪ್ಪ ಶೆಟ್ಟಿ (ಗೋಪಿವೃತ್ತ) ಗೋಪಿವೃತ್ತ ಮಾರ್ಗವಾಗಿ ಮಹಾವೀರ ವೃತ್ತ ತಲುಪಿತು.
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆ ಕಾರ್ಯಕರ್ತರು ಭಾಗಿವಹಿಸಿದ್ದರು.
ಪ್ರತಿಭಟನೆಯಲ್ಲಿ ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಸದಸ್ಯರಾದ ವಿಶ್ವಾಸ್, ಶಂಕರ್ ಗನ್ನಿ, ಮಹಾಲಿಂಗ ಶಾಸ್ತ್ರಿ, ದಿಲೀಪ್ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.