Sunday, December 7, 2025
Sunday, December 7, 2025

Holehonur Police ಹೊಳೆ ಹೊನ್ನೂರಿನ ಬಳಿ ಭದ್ರಾ ಚಾನಲ್ ನಲ್ಲಿ ಮುಳುಗಿ ಇಬ್ಬರ ಬಾಲಕರ ಸಾವು

Date:

Holehonur Police ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.

ನಡೆದಿದ್ದೇನು?

ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ.

Holehonur Police ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...