Monday, September 21, 2026
Monday, September 21, 2026

Geeta Shivaraj Kumar ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆ ಯಜಮಾನಿಗೆ ವಾರ್ಷಿಕ ₹1 ಲಕ್ಷ, ರೈತರ ಸಾಲ ಮನ್ನಾ- ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್

Date:

Geeta Shivarajkumar ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ 1 ಲಕ್ಷ,ರೈತರ ಸಾಲ ಮನ್ನಾ, ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.

ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಅಧಿಕಾರ ಕೈಲಿದ್ದಾಗ ಕ್ಷೇತ್ರದ ಅಭಿವೃದ್ಧಿ ವಿಚಾರದ ಕುರಿತ ಧ್ವನಿ ಎತ್ತದ ಕೆಲವರು ನನ್ನ ಬಗ್ಗೆ ಟೀಕಿಸುತ್ತಿದ್ದಾರೆ. ಇದೆಲ್ಲದಕ್ಕೂ ಮುಂದಿನ ದಿನದಲ್ಲಿ ಉತ್ತರ ನೀಡಲಾಗುತ್ತದೆ. ಅದಕ್ಕೆ, ಮತದಾರರು ನನಗೆ ಬೆಂಬಲ ನೀಡಬೇಕು ಎಂದರು.

Geeta Shivarajkumar ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ.

ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಡಾ|| ಶ್ರೀನಿವಾಸ ಕರಿಯಣ್ಣ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕು. ಇಲ್ಲಿ, ಕ್ಷೇತ್ರದ ಜನರ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...