Monday, November 25, 2024
Monday, November 25, 2024

Kateel Ashok Pai Memorial College ಕೊನಗವಳ್ಳಿಯಲ್ಲಿ ಮತದಾನ- ಮಹಾದಾನ ಬೀದಿ ನಾಟಕ ಪ್ರದರ್ಶನ

Date:

Kateel Ashok Pai Memorial College ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯತ್, ಸ್ವೀಪ್ ಶಿವಮೊಗ್ಗ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಕಾಲೇಜಿನ ದತ್ತು ಗ್ರಾಮವಾದ ಕೋನಗನವಳ್ಳಿ ತಾಂಡದಲ್ಲಿ ಉದ್ಘಾಟಿಸಲಾಯಿತು.

ವಿದ್ಯಾರ್ಥಿಗಳು “ಮತದಾನ ಮಹಾದಾನ” ಎಂಬ ಬೀದಿ ನಾಟಕವನ್ನು ಮಾಡುವುದರೊಂದಿಗೆ ಪ್ರತಿ ಮನೆಗೂ ಭೇಟಿ ನೀಡಿ ಮತದಾನ ಮಾಡಲು ಪ್ರೇರೇಪಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಶಿವಮೊಗ್ಗ ವತಿಯಿಂದ ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾ ದ ಶ್ರೀ ಸ್ನೇಹಲ್ ಸುಧಾಕರ್ ಲೋಖಂಡೆಯವರು ಯುವ ಮತದಾರರನ್ನುದೇಶಿಸಿ ಮಾತನಾಡಿದರು.

ಅವರು “ನಮ್ಮ ದೇಶದಲ್ಲಿ 18 – 30 ವರ್ಷದೊಳಗಿನ ಯುವಜನರ ಸಂಖ್ಯೆಯೇ ಪ್ರಧಾನವಾಗಿದ್ದು ಯುವಜನರ ಜವಾಬ್ದಾರಿಯುತ ಮತದಾನವೇ ಭವಿಷ್ಯದಲ್ಲಿ ದೇಶದ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ” ಎಂದು ತಿಳಿಸಿದರು.

ಎಲ್ಲಾ ಯುವ ಜನರು ಕಡ್ಡಾಯವಾಗಿ ಮತದಾನ ಮಾಡುವುದರೊಂದಿಗೆ ಎಲ್ಲಾ ಅರ್ಹ ಮತದಾರರನ್ನು ಮೇ 7 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಿರಿ ಎಂದು ಕರೆ ನೀಡಿದರು.

Kateel Ashok Pai Memorial College ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಸ್ವೀಪ್ ತರಬೇತುದಾರರಾದ ಶ್ರೀ ನವೀನ್ ಅಹಮದ್ ಪರ್ವಿಜ್ ರವರು ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವುದರೊಂದಿಗೆ ಜವಾಬ್ದಾರಿಯುತ ಮತದಾನದ ಅಂಶಗಳನ್ನು ತಿಳಿಸಿಕೊಟ್ಟರು. “ಯಾವ ಕಾರಣಕ್ಕೂ ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತದಾನ ನಡೆಸುವುದು ಜವಾಬ್ದಾರಿಯುತ ಪೌರರ ಕರ್ತವ್ಯ” ಎಂದು ತಿಳಿಸಿದರು.

ಎನ್ ಎಸ್ ಎಸ್ ವಿದ್ಯಾರ್ಥಿಗಳೇ ನಡೆಸಿದ ಕಾರ್ಯಕ್ರಮದಲ್ಲಿ ಶ್ರೀಯುತ ಮಂಜುನಾಥ್ ಸ್ವಾಮಿಯವರು ನಿರ್ದೇಶಿಸಿದ ಬೀದಿ ನಾಟಕವು ಎಲ್ಲರ ಗಮನ ಸೆಳೆಯಿತು. ಈ ಬೀದಿ ನಾಟಕವು ನಗರದ ಪ್ರಮುಖ ಪ್ರದೇಶಗಳಲ್ಲಿ ಪ್ರದರ್ಶಿಸಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದರು. ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತದಾನ ಮಾಡುವ ಪ್ರತಿಜ್ಞೆಯನ್ನು ಕೈಗೊಂಡರು.

ಈ ಕಾರ್ಯಕ್ರಮದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ಸುಕೀರ್ತಿ, ಶ್ರೀ ರಾಬರ್ಟ್ ರಾಯಪ್ಪ, ಎಂಸಿಸಿಎಸ್ ನ ನಿರ್ದೇಶಕರಾದ ಡಾ.ರಾಜೇಂದ್ರ ಚೆನ್ನಿ, ಉಪನ್ಯಾಸಕರಾದ ಡಾ.ಅರ್ಚನಾ ಭಟ್, ಶ್ರೀ ಮಂಜುನಾಥ ಸ್ವಾಮಿ, ಕಾವ್ಯ, ಗೌರಿ ಶ್ರೀ, ಮೋಹನ್ ಕುಮಾರ್, ಶ್ರೀಮತಿ ಮಾಲತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...