Amith Shah ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ನೀಡಿರುವ ಮುಸ್ಲಿಂ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Amith Shah ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಸ್ಲಿಮರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಮೊದಲು ಹೇಳಿದ್ದರು. ಅವಿಭಜಿತ ರಾಜ್ಯದಲ್ಲಿ ಅಂದಿನ ಕಾಂಗ್ರೆಸ್ ಸಿಎಂ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರು ಪ್ರಾರಂಭಿಸಿದ 4% ಮುಸ್ಲಿಂ ಕೋಟಾವನ್ನು ಷಾ ಅಥವಾ ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಲು ಸಾಧ್ಯವಿಲ್ಲ. ಬಿಜೆಪಿಯ ಟೀಕೆಗಳ ನಡುವೆ ರಾಜ್ಯದ ಹಿಂದಿನ ಬಿಆರ್‌ಎಸ್ ಸರ್ಕಾರವೂ ಮೀಸಲಾತಿಯನ್ನು ತೆಗೆದುಹಾಕಲು ನಿರಾಕರಿಸಿತ್ತು. 4% ಮುಸ್ಲಿಂ ಮೀಸಲಾತಿ ಧರ್ಮದ ಆಧಾರದ ಮೇಲೆ ಅಲ್ಲ. ಅದು ಸಾಮಾಜಿಕ-ಆರ್ಥಿಕ ಸ್ಥಾನಮಾನದ ಆಧಾರದ ಮೇಲೆ ಎಂದು ನವೆಂಬರ್‌ನಲ್ಲಿ ಅಂದಿನ ರಾಜ್ಯ ಸಚಿವ ಕೆ.ಟಿ.ರಾಮರಾವ್ ಹೇಳಿದ್ದರು.