Tuesday, August 25, 2026
Tuesday, August 25, 2026

Additional District and Sessions Court ತಂದೆಯನ್ನ ಕೊಲೆಗೈದ ಮಗನಿಗೆ ಜೀವಾವಧಿ ಶಿಕ್ಷೆ, ಸಾಗರ ಕೋರ್ಟ್ ತೀರ್ಪು

Date:

Additional District and Sessions Court ಸಾಗರ ಪೇಟೆ ಠಾಣೆಯಲ್ಲಿ 2013ರಲ್ಲಿ ದಾಖಲಾಗಿದ್ದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗೆ ಶುಕ್ರವಾರ ಸಾಗರದ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10.000 ರೂ.ದಂಡ ವಿಧಿಸಿದೆ.
ಬೆಂಗಳೂರಿನ ನಾಗಾನಂದ್ ಕೋಲಾರ ಅಪರಾಧಿ,
2013,ಅ.29 ರಂದು ಸಾಗರದ ವರದಶ್ರೀ ಲಾಡ್ಜಿನಲ್ಲಿ ಕಸ್ತೂರಿ ರಂಗನ್ ಅವರನ್ನು ಅವರ ಮಗ ನಾಗಾನಂದ್ ಕೊಲೆ ಮಾಡಿ,ತಾಯಿ ರಮಾ ಅವರ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದ.
ಆರೋಪಿ ನಾಗಾನಂದ್,ತನ್ನ ತಂದೆ ಹಾಗೂ ತಾಯಿಯೊಂದಿಗೆ ವರದಶ್ರೀ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡಿದ್ದನು.
ತಂದೆ ಕಸ್ತೂರಿ ರಂಗನ್ ಅವರು ಮಲಗಿದ್ದ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ,ತಾಯಿ ರಮಾ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದ,
ವಿಚಾರಣೆ ನಡೆಸಿದ ನ್ಯಾಯಾಲಯವು 2014ರಂದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತು.
ತೀರ್ಪು ಪ್ರಶ್ನಿಸಿ ಆರೋಪಿ ನಾಗಾನಂದ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದನು.
Additional District and Sessions Court ನ್ಯಾಯಾಲಯವು ಎರಡು ಸಾಕ್ಷಿಗಳನ್ನು ಹಾಗೂ 313 ಹೇಳಿಕೆ ಪಡೆದು ತೀರ್ಪು ನೀಡಲು ಆದೇಶಿಸಿತ್ತು.
ಸಾಕ್ಷಿಗಳ ಹೇಳಿಕೆ ಆಧರಿಸಿ,ಸ್ಥಳದಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿ ನಾಗಾನಂದನಿಗೆ ಜೀವಾವಧಿ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ದಂಡ ವಿಧಿಸಿ ಇಲ್ಲಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಪ್ರಭಾವತಿ ಜಿ.ಆದೇಶ ಪ್ರಕಟಿಸಿದ್ದಾರೆ.
ಪ್ರಾಸಿಕ್ಯೂಷನ್ ಪರ
ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯಕ್ ವಾದಿಸಿದ್ದಾರೆ.
ಹೆಡ್ ಕಾನ್ಸ್ ಟೇಬಲ್ ಸೋಮಪ್ಪ ಸಹಕಾರ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...