Thursday, June 18, 2026
Thursday, June 18, 2026

Lok Sabha Election ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಒಟ್ಟು 36 ಮಾದರಿ ಮತಗಟ್ಟೆ ಸ್ಥಾಪಿಸುವ ಉದ್ದೇಶವಿದೆ- ಸ್ನೇಹಲ್ ಸುಧಾಕರ ಲೋಖಂಡೆ

Date:

Lok Sabha Election ಶಿವಮೊಗ್ಗದಲ್ಲಿ ಈ ಬಾರಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗಲು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿüಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಏ.28 ರ ಬೆಳಿಗ್ಗೆ 7 ಕ್ಕೆ ಜಿಲ್ಲಾಧಿಕಾರಿ ಕಚೇರಿ ಯಿಂದ ಜಿಲ್ಲಾ ಪಂಚಾಯತ್ ವರೆಗೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವತಿಯಿಂದ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಥಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಅವರು ಮಾತನಾಡಿದರು.

ನಮ್ಮ ನಡೆ ಮತಗಟ್ಟೆಗಳ ಕಡೆ ಕಾರ್ಯಕ್ರಮದ ಅಂಗವಾಗಿ ಇಂದು ಎಲ್ಲ ತಾಲ್ಲೂಕುಗಳಲ್ಲಿ ಧ್ವಜಾರೋಹಣ ನಡೆದಿದ್ದು, ಜಿಲ್ಲೆಯ 36 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಮಾದರಿ ಮತಗಟ್ಟೆಗಳ ಮೂಲಕ ಚುನಾವಣಾ ಪ್ರಕ್ರಿಯೆ ವೀಕ್ಷಣೆ ಮತ್ತು ಮಾಹಿತಿಯನ್ನು ಮತದಾರರಿಗೆ ಒದಗಿಸಲಾಗುವುದು ಎಂದರು.

ಶಿವಮೊಗ್ಗ ಮಹಾನಗರಪಾಲಿಕೆ ಅಧಿಕಾರಿ ಸುಪ್ರಿಯ ಮಾತನಾಡಿ ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಮತದಾನದ ಪ್ರಮಾಣ ಹೆಚ್ಚಿದೆ. ಆದರೆ ಶಿವಮೊಗ್ಗ ನಗರ ಮತ್ತು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಾವೆಲ್ಲ ಮತದಾನ ಮಾಡೋಣ ಎಂದು ತಿಳಿಸಿದರು.

ಸ್ವೀಪ್ ಐಕಾನ್ ಹಾಗೂ ಮನೋವೈದ್ಯರಾದ ಡಾ. ಶುಬ್ರತಾ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮತದಾನ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಮೇ 7 ಕ್ಕೆ ಯಾವುದೇ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳದೆ ಎಲ್ಲರೂ ಮತದಾನ ಮಾಡಿರೆಂದು ಅರಿವು ಮೂಡಿಸಿದರು.

Lok Sabha Election ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸ್ವೀಪ್ ಐಕಾನ್ ನಾಗರಾಜ್ ತೊಂಬ್ರಿ ಅವರು ಮತದಾನದ ಕುರಿತಾದ ಗೀತೆ ಗಾಯನ ಮಾಡಿ ಜಾಗೃತಿ ಮೂಡಿಸಿದರು.

ಪ್ರಥಮ ಬಾರಿಗೆ ಮತದಾಮ ಮಾಡುತ್ತಿರುವ ಯುವ ಮತದಾರರಿಗೆ ಜಿಲ್ಲಾ ಪಂಚಾಯತ್ ಸಿ ಇ ಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮತದಾನ ಪ್ರಮಾಣ ಪತ್ರವನ್ನು ನೀಡಿದರು.

ಇದೇ ವೇಳೆ ಜಿಲ್ಲಾ ಪಂಚಾಯತ್‍ನಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಿ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಮತದಾನ ಪ್ರಕ್ರಿಯೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ನಮ್ಮ ನಡೆ ಮತಗಟ್ಟೆ ಕಡೆ ಜಾಥಾವು ಜಿಲ್ಲಾಡಳಿತ ಕಚೇರಿಯಿಂದ ಹೊರಟು ಜಿಲ್ಲಾ ಪಂಚಾಯತ್ ತಲುಪಿತು. ಜಾಥಾದಲ್ಲಿ ಹೊಳೆಹೊನ್ನೂರು ಚಂದ್ರನಾಯ್ಕ್ ಡೊಳ್ಳು ಕುಣಿತ ತಂಡದವರು ಪಾಲ್ಗೊಂಡು ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ರಾಜ್ಯ ಮಟ್ಟದ ಸ್ವೀಪ್ ತರಬೇತಿದಾರ ನವೀದ್ ಅಹ್ಮದ್ ಪರ್ವೇಜ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...