Wednesday, October 2, 2024
Wednesday, October 2, 2024

Voting Awareness ಸಿಟಿ ಸೆಂಟ್ರಲ್ ಮಾಲ್ ನಲ್ಲಿ ಸಾರ್ಜನಿಕರ ಕಣ್ಸೆಳೆಯುತ್ತಿರುವ ಮತದಾನ ಜಾಗೃತಿಯಮಾದರಿ

Date:

ಶಿವಮೊಗ್ಗ ,ಏ.29
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮನವಿ ಮಾಡಿದರು.

Voting Awareness ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್‍ನಲ್ಲಿ ಏ.28  ರ ಸಂಜೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ  ಮತದಾನ ಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಮಾಲ್‍ನಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಮಾಡೆಲ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇದೆ. ಮತದಾನ ಪ್ರಮಾಣ ಹೆಚ್ಚಬೇಕು. ಬೆಂಗಳೂರಿನಲ್ಲಿ ಶೇಕಡ  50 ಕ್ಕಿಂತ  ಕಡಿಮೆ ಮತದಾನ ನಡೆದಿದ್ದು ಆ ರೀತಿ ನಮ್ಮ ಶಿವಮೊಗ್ಗದಲ್ಲಿ  ಆಗಬಾರದು. ಮತ ಚಲಾಯಿಸುವ ಮುಖಾಂತರ ದೇಶದ ಅಭಿವೃದ್ಧಿಯಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

   ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ  ಲೋಕಸಭಾ ಚುನಾವಣೆಯಲ್ಲಿ ಶೇಕಡ 76 ರಷ್ಟು ಮತದಾನ ನಡೆಡಿದ್ದು, ನಗರ ಪ್ರದೇಶದಲ್ಲಿ ಶೇಕಡಾ 60 ರಷ್ಟು ಮಾತ್ರ ಮತದಾನ ನಡೆದಿದೆ. ನಗರ ಪ್ರದೇಶದ ಜನರು ಮತದಾನ ಮಾಡುವಲ್ಲಿ ಆಸಕ್ತಿ ಕಡಿಮೆ ತೋರುತ್ತಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಜನರ ಜೀವನ ರೂಪಿಸುವುದಕ್ಕೆ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದ್ದು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು.

    Voting Awareness ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್  ಮಾತನಾಡಿ ಮೇ 7 ಕ್ಕೆ ಬೆಳಗ್ಗೆ 7 ಗಂಟೆ  ಯಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದು. ವಯೋವೃದ್ಧರು  ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಹಾಕುವ ಅವಕಾಶ ಈ ಬಾರಿ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮಗಳು ಕಂಡುಬಂದಲ್ಲಿ ತಮ್ಮ ಮೊಬೈಲ್‍ನಲ್ಲಿ ಸಿ-ವಿಜಿಲ್  ಆ್ಯಪ್ ಡೌನ್‍ಲೋಡ್ ಮಾಡಿಕೊಂಡು - ಮೂಲಕ ದೂರು ಸಲ್ಲಿಸಬಹುದು ಮತ್ತು 1950 ಗೆ  ಕರೆ ಮಾಡಿ ಸಹ ದೂರು ನೀಡಬಹುದು ಎಂದರು.
  ಸ್ವೀಪ್ ಐಕಾನ್  ನಿವೇದನ್ ನೆಂಪೆ ಮಾತನಾಡಿ, ಶಿವಮೊಗ್ಗದ ಜನರು ಪ್ರಜ್ಞಾವಂತರೆಂದು ತೋರಿಸಿಕೊಳ್ಳಲು ಒಳ್ಳೆಯ ಅವಕಾಶ ದೊರಕಿದೆ. ಬುದ್ಧಿವಂತರು ಮತದಾನ ಮಾಡುವ ಮೂಲಕ ಪ್ರಜ್ಞಾವಂತರಾಗುತ್ತಾರೆ  ಎಂದ ಅವರು ಮೇ 7ಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಕೋರಿದರು.
   ಕಲಾವಿದರಾದ ಸತೀಶ ಪುರಪ್ಪೆಮನೆ ಹಾಗೂ ತಂಡದವರು ಚುನಾವಣಾ ಮಾಡೆಲ್ ನ್ನು ಸಿದ್ದಪಡಿಸಿದ್ದು ಸಿಟಿ ಸೆಂಟರ್ ಮಾಲ್‍ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.
   ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆಯ ಅಧಿಕಾರಿ ಸುಪ್ರಿಯ, ಸಿಟಿ ಸೆಂಟರ್ ಮಾಲ್ ನ ದರ್ಶನ್, ಪಾಲಿಕೆ ಮತ್ತು ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...