Sunday, September 27, 2026
Sunday, September 27, 2026

Madhu Bangarappa ಬಿಜೆಪಿಯವರದ್ದು ಅಭಿವೃದ್ಧಿ ಹೆಸರಿನಲ್ಲಿ ಸುಳ್ಳಿನ‌ ರಾಜಕಾರಣ- ಮಧು ಬಂಗಾರಪ್ಪ

Date:

ಕುಬಟೂರಿನಲ್ಲಿ ಸಚಿವ ಮಧುಬಂಗಾರಪ್ಪ ಮತದಾನ’ಚುನಾವಣೆಯಲ್ಲಿ ಸತ್ಯಕ್ಕೆ ಜನ ಬೆಲೆ ನೀಡುತ್ತಾರೆ’

Madhu Bangarappa ಸೊರಬ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ತಲೆಯಲ್ಲಿ ಭಾವನೆಗಳಿಲ್ಲ. ಬದಲಿಗೆ ಮತದಾರರು ಸತ್ಯಕ್ಕೆ ಬೆಲೆ ಕೊಡುತ್ತಾರೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ಇಲ್ಲಿನ ಕುಬಟೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ, ಪತ್ನಿ ಅನಿತಾ ಮಧುಬಂಗಾರಪ್ಪ ಅವರೊಂದಿಗೆ ಸರತಿ ಸಾಲಿನಲ್ಲಿ ತೆರಳಿ ಮತದಾ‌ನ ಮಾಡಿ, ಮಾಧ್ಯಮಗಳಿಗೆ ಪ್ರತಿಕ್ರಿಸಿದರು.

ಮತದಾನ ಮಾಡಿರುವುದು ಬಹಳ ಖುಷಿಯಾಗುತ್ತಿದೆ. ಮತದಾನ ಪ್ರತಿಯೊಬ್ಬರ ಹಕ್ಕು. ಜನರು ತಪ್ಪದೇ ಮತಕಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಕೋರಿದರು.

ರಾಜ್ಯದಲ್ಲಿ ಸುಳ್ಳು ಮತ್ತು ಸತ್ಯದ ನಡುವೆ ಚುನಾವಣೆ ನಡೆಯುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ಸಹಕಾರ ನೀಡಿವೆ. ಆದ್ದರಿಂದ, ಗ್ಯಾರಂಟಿ ಯೋಜನೆಗಳು ಗೆಲ್ಲುತ್ತವೆ ಎಂದರು.

ಬಿಜೆಪಿಯವರು ಅಭಿವೃದ್ಧಿ ಹೆಸರಿನಲ್ಲಿ ಸುಳ್ಳಿನ ರಾಜಕಾರಣ ನಡೆಸಿದ್ದಾರೆ. ಸುಳ್ಳು ಭರವಸೆ ನೀಡಿಕೊಂಡು ಕಾಲ ಕಳೆದಿದ್ದಾರೆ. ಆಡಳಿತಾರೂಢ ಸರ್ಕಾರ ಜನರಿಗೆ ಸಹಕಾರ ನೀಡಿದರೆ, ಜನರು ಮರಳಿ ಸರ್ಕಾರ ರಚಿಸಲು ಸಹಕಾರ ಮಾಡುತ್ತಾರೆ. ಈ ಬಾರಿ ಈ ಬೆಳವಣಿಗೆ ಆಗಲಿದೆ ಎಂದರು.

Madhu Bangarappa ಜಿಲ್ಲೆಯಲ್ಲಿ ಗೀತಾಕ್ಕ ಪರ ಪ್ರಚಾರ ಸಭೆಗಳ ಮೂಲಕ ಮತದಾರರನ್ನು ಭೇಟಿ ಮಾಡುವ ಉದ್ದೇಶ ಈಡೇರಿದ್ದಲ್ಲದೆ ರಾಷ್ಟ್ರ ನಾಯಕರು ಕೂಡ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಮತಯಾಚಿಸಿದ್ದು ಹೆಚ್ಚಿನ ಬಲ ನೀಡಿದೆ ಎಂದರು.

ಬಾಕ್ಸ್: ‘ಜಾತಿ,ಹಣದ ಹೆಸರಲ್ಲಿ ರಾಜಕಾರಣ ಸಲ್ಲದು

ಚುನಾವಣೆಗಳಲ್ಲಿ ವೈಯಕ್ತಿಕ ಟೀಕೆ- ಟಿಪ್ಪಣಿಗಳು ದೂರವಾಗಬೇಕು. ಜಾತಿ, ಹಣದ ಹೆಸರಿನಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ.
ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತ ಮಹಿಳೆಯರಿಗೆ ಸರ್ಕಾರದಿಂದ ನ್ಯಾಯ ಸಿಕ್ಕೇ ಸಿಗುತ್ತದೆ. ವಿಪಕ್ಷದವರು ಹತಾಶರಾಗಿ ಕೆಲವು ಆರೋಪ ಮಾಡುತ್ತಿದ್ದಾರೆ. ಆದ್ದರಿಂದ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...