Lok Sabha Election ಪ್ರಾಥಮಿಕ ಮಾಹಿತಿಯಂತೆ ಜಿಲ್ಲೆಯಲ್ಲಿ ಶೇ78 ರಷ್ಟು ಮತದಾನ– ಗುರುದತ್ತ ಹೆಗಡೆ ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆ
ಶಿವಮೊಗ್ಗ ಡಿಸಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರು ಮಾದ್ಯಮ ಮಿತ್ರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ.
ಕೆಲವೊಂದು ಕಡೆ ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ ಶಾಂತಿಯತವಾಗಿ ಮತದಾನವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ
ಶೇ.78 ರಷ್ಟು ಮತದಾನವಾಗಿದೆ ಎಂದು ತಿಳಿಸಿದರು.
ಕಳೆದ 2019ರಲ್ಲಿ ನಡೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇಕಡ 76 ರಷ್ಟು ಮತದಾನವಾಗಿತ್ತು.
ಈ ಬಾರಿ ಉತ್ತಮವಾದ ಸಂಖ್ಯೆಯಲ್ಲಿ ಮತದಾನ ನಡೆದಿದೆ.ಬಿಸಿಲನ್ನು ಲೆಕ್ಕಿಸದೆ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.ಶಾಂತಿಯುವಾದ ಮತದಾನವಾಗಿದೆ ಎಂದರು.
Lok Sabha Election ಪ್ರಾಥಮಿಕ ಮಾಹಿತಿಯಂತೆ ಜಿಲ್ಲೆಯಲ್ಲಿ ಶೇ78 ರಷ್ಟು ಮತದಾನ- ಗುರುದತ್ತ ಹೆಗಡೆ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ
40 ಕಡೆ ವಿವಿ ಪ್ಯಾಟ್ ಗಳನ್ನು ಬದಲಾಯಿಸಿದ್ದೇವೆ.ಹಾಗೆಯೇ ವಿವಿಧ
12 ಕಡೆ ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್ ಬದಲಾಯಿಸಿದ್ದೇವೆ.
ಮತದಾನ ಪ್ರಕ್ರಿಯೆ ಮುಗಿದಿರುವುದರಿಂದ ಮತ ಯಂತ್ರಗಳನ್ನು ಭದ್ರತೆಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ತರಲಾಗುತ್ತದೆ ಎಂದು ಹೇಳಿದರು.
ಜಿಪಿಎಸ್ ಯುಳ್ಳ ವಾಹನದಲ್ಲಿ ಪೊಲೀಸ್ ಭದ್ರತೆಯಲ್ಲಿ ಮತ ಯಂತ್ರಗಳನ್ನ ತರಲಾಗುತ್ತದೆ.
ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭೆಯ ಮತಯಂತ್ರಗಳು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಬರಲಿವೆ.ಮತ ಎಣಿಕೆ ಕೇಂದ್ರದಲ್ಲಿ ಮೂರು ಹಂತದ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕೆ ಕೇಂದ್ರದ ವ್ಯವಸ್ಥೆಯನ್ನು ಸಿಸಿ ಕ್ಯಾಮೆರಾ ಮೂಲಕ ಸರಿಹಡಿಯಲಾಗುತ್ತದೆ.
ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಅವರಿಂದ ಅನುಮತಿ ಪಡೆದ ಅಧಿಕೃತ ಏಜೆಂಟರು ಇದನ್ನು ಬಂದು ಪರಿಶೀಲಿಸಬಹುದು.
ಮತದಾನ ಯಶಸ್ವಿಯಾಗಲು ಜಿಲ್ಲಾ ಸ್ವೀಟ್ ಸಮಿತಿ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.