Karnataka School Examination and Assessment Board ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೊರಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 9 ರಂದು ಫಲಿತಾಂಶ ಪ್ರಕಟಿಸಿದೆ.
ಈ ಬಾರಿ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಒಟ್ಟು ಫಲಿತಾಂಶ ಶೇ.73.40 ಆಗಿದೆ. ಒಟ್ಟು 63,12,04 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಶೇಕಡ 10 ಫಲಿತಾಂಶ ಕುಸಿತ ಆಗಿದೆ.
ಬಾಗಲಕೋಟೆಯ ಅಂಕಿತಾ ಬಸಪ್ಪ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನಗಳಿಸಿದ್ದಾರೆ.
625/625 ಅಂಕ ಪಡೆದಿದ್ದಾರೆ.
ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಮೇದಾ ಪಿ. ಶೆಟ್ಟಿ (624 ಅಂಕ) ಎರಡನೇ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
Karnataka School Examination and Assessment Board ಪರೀಕ್ಷೆ ಬರೆದ ಅಭ್ಯರ್ಥಿಗಳು http://karresults.nic.in.ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ಈ ಬಾರಿ ಎಸ್ ಎಸ್ ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಆಗಿದ್ದಾರೆ.