Sunday, November 1, 2026
Sunday, November 1, 2026

D.K.Shivakumar ಪ್ರಜ್ವಲ್ ಪ್ರಕರಣ: ಎಚ್ ಡಿಕೆ ಸಾಕ್ಷ್ಯ ಸಮೇತ ಅಧಿವೇಶನದಲ್ಲಿ ಚರ್ಚೆಗೆ ಬರಲಿ- ಡಿ.ಕೆ.ಶಿವಕುಮಾರ್

Date:

D.K.Shivakumar ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದಿದ್ದಾರೆ.

D.K.Shivakumar ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...