Friday, March 20, 2026
Friday, March 20, 2026

Areca & Cashew Nut Theft ಸೊರಬದ ಮೂಡುಗೋಡಿನಲ್ಲಿಸು.₹ 7 ಲಕ್ಷ ಮೌಲ್ಯದಗೇರುಬೀಜ,ಅಡಿಕೆ ಕಳವು

Date:

Areca & Cashew Nut Theft ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು. ಶುಕ್ರವಾರ ಬೆಳಗ್ಗೆ ಗೋದಾಮಿಗೆ ತೆರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

Areca & Cashew Nut Theft ಸೊರಬದ ಮೂಡುಗೋಡಿನಲ್ಲಿಸು.₹ 7 ಲಕ್ಷ ಮೌಲ್ಯದಗೇರುಬೀಜ,ಅಡಿಕೆ ಕಳವು ಕಳ್ಳರು ಗೋದಾಮಿನ ಬೀಗ ಮುರಿದು ಗೋದಾಮಿನಲ್ಲಿದ್ದ 3 ಲಕ್ಷ ರೂ., ಮೌಲ್ಯದ 15 ಕ್ವಿಂಟಾಲ್ ಒಣ ಸಿಪ್ಪೆ ಗೋಡು ಅಡಿಕೆ, 2.4 ಲಕ್ಷ ರೂ., ಮೌಲ್ಯದ 6 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ ಸುಮಾರು 1.2 ಲಕ್ಷ ರೂ., ಮೌಲ್ಯದ 10 ಕ್ವಿಂಟಾಲ್ ಗೇರು ಬೀಜವನ್ನು ಕಳ್ಳತನ ಮಾಡಲಾಗಿದೆ. ಜಯಕುಮಾರ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶಿವಮೊಗ್ಗದ ಬೆಳರಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...