Thursday, June 18, 2026
Thursday, June 18, 2026

HD Revanna ಮಾಜಿ ಸಚಿವ ರೇವಣ್ಣಗೆ ಷರತ್ತಿನ ಜಾಮೀನು,ಸದ್ಯ ಪುಟ್ಟ ರಿಲೀಫ್ ನೀಡಿದ ಕೋರ್ಟ್

Date:

HD Revanna ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ನಂತರ ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿ ಜಾಮೀನು ಮಂಜೂರು ಮಾಡಿದೆ.

HD Revanna ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್ ಡಿ ರೇವಣ್ಣ ನಾಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...