Wednesday, February 4, 2026
Wednesday, February 4, 2026

Adichunchanagiri Education Trust ಶ್ರೀ ಆದಿಚುಂಚನಗಿರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Date:

Adichunchanagiri Education Trust ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಹುತೇಕ ಗ್ರಾಮೀಣ ಮಕ್ಕಳನ್ನು ಹೊಂದಿರುವ ಈ ಶಾಲೆಯಲ್ಲಿ ಎಂದಿನಂತೆ ದಾಖಲೆಯ ಫಲಿತಾಂಶ ಬಂದಿದೆ. ಸಾಕಷ್ಟು ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಇಲ್ಲಿ ಮುಂದುವರೆದ ಶಿಕ್ಷಣ ಪಡೆಯುತ್ತಿರುವುದು ವಿಶೇಷ.
ಈ ಬಾರೀ ಪರೀಕ್ಷೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕುಳಿತ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
Adichunchanagiri Education Trust ಗಣೇಶ ಕೆ.ಎಸ್. 625 ಕ್ಕೆ 588 ಅಂಕ ಪಡೆದು ಶಾಲೆಗೆ ಪ್ರಥಮ ನಾಗಿರುತ್ತಾನೆ. ಪರೀಕ್ಷೆಯಲ್ಲಿ ಕುಳಿತ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ 100 ಫಲಿತಾಂಶವನ್ನು ಪಡೆದಿರುವುದು ವಿಶೇಷ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರಾದ ರಮೇಶ್ ಹೆಚ್. ಬಿ.,ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...