Tuesday, December 16, 2025
Tuesday, December 16, 2025

Soraba News ಸೊರಬ ತಾಲ್ಲೂಕಿನಲ್ಲಿ ಭಾರಿ ಮಳೆ ಅರೆಕೊಪ್ಪದಲ್ಲಿ ಸಿಡಿಲಿಗೆ ಎತ್ತು ಸಾವು

Date:

Soraba News ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ.

ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ. ಮೃತ ಎತ್ತಿನ ಸಾವಿನಿಂದ ರೈತನಿಗೆ ಸುಮಾರು 55 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ.

Soraba News ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...

B.S. Yediyurappa ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

B.S. Yediyurappa ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಅಖಿಲ...

MESCOM ಡಿಸೆಂಬರ್ 17. ಆಯನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ...