Thursday, December 18, 2025
Thursday, December 18, 2025

ATNCC College ರಾಷ್ಟ್ರೀಯ ಸೇವಾ ಯೋಜನೆಯು ಸ್ವಯಂಸೇವಕರಲ್ಲಿ ಧೈರ್ಯ, ವಿಶ್ವಾಸ & ಮನೋಸಾಮರ್ಥ್ಯ ಬೆಳೆಸುತ್ತದೆ – ಪ್ರೊ.ಕೆ.ಎಂ.ನಾಗರಾಜು

Date:

ATNCC College ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಎನ್‌ಎಸ್‌ಎಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ, ಎಟಿಎನ್‌ಸಿ ಕಾಲೇಜಿನ ಪ್ರೊ. ಕೆ.ಎಂ.ನಾಗರಾಜು ಹೇಳಿದರು.
ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ಪಾಲ್ಗೊಳ್ಳುವುದರಿಂದ ಧೈರ್ಯ, ವಿಶ್ವಾಸ ಹಾಗೂ ಮನೋಸಾಮಾರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಬದುಕಿನ ಜನರ ಜೀವನಶೈಲಿ, ಗ್ರಾಮೀಣ ಕ್ರೀಡೆ, ಕಲೆ ಪ್ರಕಾರಗಳ ಬಗ್ಗೆ ಪರಿಚಯ ಆಗುತ್ತದೆ. ಕಾಲೇಜು ಅವಧಿಯಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು. ಎನ್‌ಎಸ್‌ಎಸ್ ಜೀವನದ ಉತ್ತಮ ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟರು.
ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ತುಂಬಾ ದೊಡ್ಡದು. ಎನ್‌ಎಸ್‌ಎಸ್ ಶಿಬಿರ ನಡೆಯುತ್ತಿರುವ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯರು ಕೈಜೋಡಿಸಿ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳ ಸಹಕಾರವು ಉತ್ತಮ ಸೇವೆ ಸಲ್ಲಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.
ATNCC College ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ಸಮಿತಿಯು ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಿಕೊಂಡು ಬರುತ್ತಿದೆ. ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ತಲುಪಿ ಸಮಾಜದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ, ಡಾ. ಪರಮೇಶ್ವರ ಶಿಗ್ಗಾವ್, ಅರುಣ್ ದೀಕ್ಷಿತ್, ನಿವೃತ್ತ ಪ್ರಾಚಾರ್ಯ ಡಾ. ಧನಂಜಯ, ಪ್ರದೀಪ್ ಎಲಿ, ಕೇಶವಪ್ಪ, ಸಂತೋಷ್, ಕಾರ್ಯದರ್ಶಿ ಕಿಶೋರ್ ಕುಮಾರ್, ಗಣೇಶ್ ಎಂ.ಅಂಗಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...