Monday, December 8, 2025
Monday, December 8, 2025

Patna Police ಪೊಲೀಸ್ ವಂಶದಲ್ಲಿದ್ದ ಈರ್ವರ ಆತ್ಮಹತ್ಯೆ ಶಂಕೆ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಗ್ರಾಮಸ್ಥರು

Date:

Patna Police ಪಾಟ್ನಾ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.
ಉದ್ರಿಕ್ತರು, ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ, ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ನಂತರ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರು ಗ್ರಾಮಸ್ಥರು ಗಾಯಗೊಂಡಿದ್ದಾರೆ.
ಯುವಕನೋರ್ವ ತನ್ನ ಪತ್ನಿಯ ನಿಧನದ ಹಿನ್ನೆಲೆ ಎರಡು ದಿನಗಳ ಹಿಂದೆ 14 ವರ್ಷದ ಅತ್ತಿಗೆಯನ್ನು ಮದುವೆಯಾಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಆತ ತನ್ನ ಹೆಂಡತಿಯಂತೆ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದ ನಂತರ ಗುರುವಾರ ಮಧ್ಯಾಹ್ನ ಪೊಲೀಸರು ಆತನನ್ನು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ವಿಚಾರಣೆಗಾಗಿ ಕರೆತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಗುರುವಾರ ಸಂಜೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Patna Police ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಿತ ಗ್ರಾಮಸ್ಥರು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿದ್ದು, ಪೊಲೀಸರು ಥಳಿಸಿದ ನಂತರ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದ ಪೋಲಿಸರು ಬಳಿಕ ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಿಂದ ಅರಾರಿಯಾ ಎಎಸ್‌ಪಿ ಸೇರಿದಂತೆ 6 ಪೋಲಿಸರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಪೊಲೀಸ್‌ ಠಾಣೆಯೊಳಗಿನ ಸಿಸಿಟಿವಿ ವೀಡಿಯೋ, ಜೈಲಿನ ಸೆಲ್‌ನ ಒಳಗಿನಿಂದ ಯುವಕ ಬಟ್ಟೆಯನ್ನು ಬಳಸಿ ನೇಣು ಬಿಗಿದುಕೊಂಡಿರುವುದನ್ನು ತೋರಿಸಿದೆ. ಸ್ಥಳಕ್ಕೆ ವಿವಿಧ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅವ್ಯವಸ್ಥೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ 17 ಜನರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಇತರರನ್ನು ಗುರುತಿಸಲಾಗುತ್ತಿದೆ ಎಂದು ಎಸ್‌ಪಿ ಅಮಿತ್ ರಂಜನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...