Sunday, August 2, 2026
Sunday, August 2, 2026

Madhu Bangarappa ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿ- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನೆಡೆಯುವ ವಿಧಾನ ಪರಿಷತ್ ಚುನಾವಣೆಯ “ಪೂರ್ವಭಾವಿ ಸಭೆ”ಯನ್ನುದ್ದೇಶಿಸಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿದರು.

ಜೂನ್ 3 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಆಯನೂರು ಮಂಜುನಾಥ್ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಾ.ಕೆ.ಕೆ ಮಂಜುನಾಥ್ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ತಮ್ಮ ಅಮೂಲ್ಯ ಮತವನ್ನು ನೀಡುವ ಮೂಲಕ ವಿಧಾನಪರಿಷತ್ ಗೆ ಆಯ್ಕೆ ಮಾಡುವುದರ ಜೊತೆಗೆ ತಮ್ಮ ಸಂಬಂಧಿಕರು, ಸ್ನೇಹಿತರಿಂದಲೂ ಮತ ಕೊಡಿಸಿ ಗೆಲ್ಲಿಸುವಂತೆ ಮನವಿ ಮಾಡಿದರು.

Madhu Bangarappa ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಪ್ರಸನ್ನ ಕುಮಾರ್, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಶ್ರೀ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀ ಡಾ.ಕೆ.ಕೆ ಮಂಜುನಾಥ್ ಕುಮಾರ್, ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಎಂಎಡಿಬಿ ಅಧ್ಯಕ್ಷರಾದ ಶ್ರೀ ಆರ್.ಎಂ ಮಂಜುನಾಥಗೌಡ್ರು, ಸೂಡಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್ ಸುಂದರೇಶ್, ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ಎನ್.ರವಿ ಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಪಲ್ಲವಿ, ಮರಿಯಪ್ಪ, ಶ್ರೀನಿವಾಸ್ ಕರಿಯಣ್ಣ, ಹೆಚ್. ಸಿ ಯೋಗೇಶ್, ಬಲ್ಕಿಷ್ ಬಾನು ಸೇರಿದಂತೆ ಅನೇಕ ಮುಖಂಡರು-ಗಣ್ಯರು, ಎಲ್ಲ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...