Thursday, June 18, 2026
Thursday, June 18, 2026

Gopal Krishna Belur ಸಾಗರ ಶಾಸಕರ ವಿಡಿಯೋಗೆ ತಪ್ಪು ಶೀರ್ಷಿಕೆ ನೀಡಿ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ ವಿರುದ್ಧ ದೂರು ದಾಖಲು

Date:

Gopal Krishna Belur ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್ ಆಗಿತ್ತು.

ಅದೇ ವಿಡಿಯೋವನ್ನು ದುರುಪಯೋಗ ಪಡಿಸಿಕೊಂಡ ಅಪರಿಚಿತನೊಬ್ಬ ಜನಪ್ರಿಯ ಶಾಸಕ ಗೋಪಾಲಕೃಷ್ಣ ಬೇಳೂರುರ ವಿರುದ್ಧ ಇನಸ್ಟಾಗ್ರಾಂ ನಲ್ಲಿ ಆಪಪ್ರಚಾರ ಮಾಡುವ ಉದ್ದೇಶದಿಂದ ಆರೋಪಿಯು ಇನ್ಸ್ಟ್ರಾಗ್ರಾಮ್ ನಲ್ಲಿ”khadeema_congress” ಎಂಬ  ಖಾತೆಯಿಂದ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾನೆ.

ಆರೋಪಿಯು  ಶಾಸಕರಿಗೆ ತೇಜೋವಧೆ ಮಾಡುವ ಮತ್ತು ಆಗೌರವವನ್ನು ತೋರಿಸುವ ಪ್ರಯತ್ನವನ್ನು ಮಾಡಿದ್ದಾನೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ “ಚಿನ್ಮಯ್ ಸಿ.ಎಂ” ರವರು ಸಾಗರ ಪೇಟೆ ಠಾಣೆಗೆ ದೂರು ನೀಡಿ ಆರೋಪಿಯ ಈ ಕೃತ್ಯವು  ಕಾನೂನುಬಾಹಿರವಾಗಿದ್ದು ಗೌರವಾನ್ವಿತ ಶಾಸಕರ ತೋಜೋವಧೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕಾನೂನಿನ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ದೂರನ್ನು ನೀಡಿದ್ದಾರೆ.

Gopal Krishna Belur ಇದೀಗ ಸಾಗರ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರನ್ನು ದಾಖಲಿಸಿಕೊಂಡ ಸಾಗರ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...