Thursday, September 17, 2026
Thursday, September 17, 2026

Prajwal Revanna ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಇಲಾಖೆಯಿಂದ ಷೋಕಾಸ್ ನೋಟೀಸ್

Date:

Prajwal Revanna ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸೆರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು.

ಇದರ ಬೆನ್ನಲೇ ವಿದೇಶಾಂಗ ಸಚಿವಾಲಯ, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹಂತ ಹಂತವಾಗಿ ಸಂಕಷ್ಟು ಶುರುವಾದಂತಾಗಿದೆ.

Prajwal Revanna ವಿದೇಶಾಂಗ ಸಚಿವಾಲಯ ಇಂದು ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ವಿದೇಶಕ್ಕೆ ತೆರಳಲು ಕಾರಣವೇನು? ಆರೋಪದ ಬಗ್ಗೆ ಹಾಗೂ ತನಿಖೆಗೆ ಯಾವಾಗ ಹಾಜರಾಗುತ್ತೀರಿ? ಮತ್ತು ಪಾಸ್ಪೋರ್ಟ್ ರದ್ದುಗೊಳಿಸುವ ಬಗ್ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 26 ರಂದೇ ದೇಶ ಬಿಟ್ಟು ಜರ್ಮನಿಗೆ ಹೋಗಿದ್ದಾರೆ. ಯಾವುದೇ ನೋಟಿಸ್ ಜಾರಿ ಮಾಡಿದರೂ ಸಹ ಪ್ರಜ್ವಲ್ ರೇವಣ್ಣ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರಿಗೆ ಎರಡು ಬಾರಿ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...