Wednesday, September 9, 2026
Wednesday, September 9, 2026

Udupi Gang War ಉಡುಪಿ-ಮಣಿಪಾಲ ರಸ್ತೆಯಲ್ಲಿ ಗ್ಯಾಂಗ್ ವಾರ್

Date:

Udupi Gang War ಉಡುಪಿ-ಮಣಿಪಾಲ ರಸ್ತೆಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Udupi Gang War ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...