Friday, December 5, 2025
Friday, December 5, 2025

Kuvempu University ಕುವೆಂಪು ವಿವಿ ಸಂಯೋಜಿತ ಕಾಲೇಜುಗಳ ನವೀನ ಸಂಯೋಜನೆಗೆ ಅರ್ಜಿಗಳ ಆಹ್ವಾನ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಿಂದ ಎಲ್ಲಾ ಸಂಯೋಜಿತ ಕಾಲೇಜುಗಳ ನವೀನ ಸಂಯೋಜನೆಗಾಗಿ UUCMS ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್/ ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು UUCMS ತಂತ್ರಾಂಶದಲ್ಲಿ http://uucms.karnataka.gov.in ಮೂಲಕ ಸಲ್ಲಿಸಿ, ನಂತರ ಡೌನ್‍ಲೋಡ್ ಮಾಡಿಕೊಂಡ ಹಾರ್ಡ್ ಪ್ರತಿಯನ್ನು ಪೂರಕ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿರ್ದೇಶಕರು, ಕಾಲೇಜು ಅಭಿವೃದ್ಧಿ ಪರಿಷತ್ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451
ಇವರಿಗೆ ಸಲ್ಲಿಸುವುದು.

Kuvempu University ದಂಡಶುಲ್ಕವಿಲ್ಲದೆ ಮೇ-27 ರೊಳಗಾಗಿ ಹಾಗೂ ರೂ. 10,000/- ದಂಡಶುಲ್ಕದೊಂದಿಗೆ ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.* ಪರಿಷ್ಕೃತ ಸಂಯೋಜನೆ ಶುಲ್ಕವನ್ನು UUCMS ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಹಣಕಾಸು ಅಧಿಕಾರಿಗಳು, ಕುವೆಂಪು ವಿವಿ, ಶಂಕರಘಟ್ಟ, ಸಂಯೋಜನಾ ಖಾತೆ ಸಂ.: 54023035811, ಎಸ್.ಬಿ.ಐ, ಜ್ಞಾನ ಸಹ್ಯಾದ್ರಿ ಶಾಖೆ, ಶಂಕರಘಟ್ಟ, (IFSC Code SBIN0040759) ಇಲ್ಲಿಗೆ ಜಮಾ ಮಾಡುವಂತೆ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಶಿವಮೊಗ್ಗ ಜಿಲ್ಲೆ. ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...