Sunday, May 24, 2026
Sunday, May 24, 2026

ಅಕ್ರಮ ಮರಳು ಸಾಗಣೆ ತಡೆಗೆ ಕಠಿಣ ಕ್ರಮ

Date:

ಕರ್ನಾಟಕದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ಸಂಬಂಧ ಪ್ರತ್ಯೇಕ ಕಾವಲು ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕರ್ನಾಟಕದ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ತಿಳಿಸಿದೆ.

ರಾಜ್ಯದ ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಲಾಗಿದೆ. ಎನ್ ಜಿಟಿ ಯ ದಕ್ಷಿಣ ಪೀಠಕ್ಕೆ ಸಲ್ಲಿಸಿರುವ ಅಫಿಡೆವಿಟ್ ನಲ್ಲಿ ಇಲಾಖೆಯು ಈ ಮಾಹಿತಿಯನ್ನು ನೀಡಿದೆ.

ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇಡುವಂತೆ ಸಂಬಂಧಪಟ್ಟ ಜಿಲ್ಲೆಗಳ ವಿಜ್ಞಾನಿಗಳಿಗೆ ಸೂಚಿಸಲಾಗಿದೆ. ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್, ಕಂದಾಯ, ಹಾಗೂ ಅರಣ್ಯ ಇಲಾಖೆಗೆ ಅಧಿಕಾರವನ್ನು ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಸಂಬಂಧ, ಕೆರೆಗಳು, ಹೊಂಡಗಳು ಹಾಗೂ ನದಿಗಳಿಗೆ ಸಂಪರ್ಕ ಕಲ್ಪಿಸುವ ಅನಧಿಕೃತ ಗ್ರಾಮೀಣ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇಲಾಖೆಯು ಮರಳು ಬ್ಲಾಕ್ ಗಳನ್ನು ಗುರುತಿಸಿ, ಅನಂತರ ವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ಹರಾಜು ಹಾಕುತ್ತಿದೆ ಎಂದು ಇಲಾಖೆಯು ತಿಳಿಸಿದೆ.

ಗುತ್ತಿಗೆದಾರರು ಮರಳು ಸಾಗಿಸಲು ಬಳಸುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರಿಂದ ಮರಳು ಸಾಗಾಣಿಕೆಯ ಮೇಲೆ ನಿಗಾವಹಿಸಲು ಸಾಧ್ಯವಾಗಲಿದೆ. ಪ್ರಮುಖ ಸ್ಥಳಗಳಲ್ಲಿ ವೇ-ಬ್ರಿಡ್ಜ್ ಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಇಲಾಖೆಯು ಎನ್ ಜಿಟಿ ಗೆ ಮಾಹಿತಿ ನೀಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...