Ministry of Agriculture and Farmers’ Welfare ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವನ್ನು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡಿರುವ ಎನ್‌ಡಿಎ ಸರಕಾರದ ನಿರ್ಧಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಪ್ರತಿಭಟಿಸಿದ್ದು, ಜೂನ್ 2017ರಲ್ಲಿ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ನಡೆದ 6 ರೈತರ ಹತ್ಯೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದೆ.
ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನ, ಸಾಲ ಮನ್ನಾ ಹಾಗೂ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ವಿರುದ್ಧ ಬೃಹತ್ ಹೋರಾಟದಲ್ಲಿ ಪಾಲ್ಗೊಂಡು ರೈತರನ್ನು ಹತ್ಯೆ ಮಾಡಲಾಗಿದೆ ಎಂದು ಎಸ್‌ಕೆಎಂ ಆರೋಪಿಸಿದೆ.
ಎಸ್‌ಕೆಎಂ ತನ್ನ ಸಾಮಾನ್ಯ ಸಭೆಯನ್ನು ಜುಲೈ 10ರಂದು ದೆಹಲಿಯಲ್ಲಿ ನಡೆಸುವುದಾಗಿ ತೀರ್ಮಾನಿಸಿದ್ದು, ಸಭೆಯಲ್ಲಿ ಭಾರತದ ವಿವಿಧ ರಾಜ್ಯಗಳ ರೈತ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.
2014 ಮತ್ತು 2019ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರಕಾರ ನಡೆಸಿದಾಗ ದುರಹಂಕಾರ ಮತ್ತು ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ. ಇದು ದೇಶಾದ್ಯಂತ ರೈತರು ಮತ್ತು ಗ್ರಾಮೀಣ ಜನರಲ್ಲಿ ಕೋಪವನ್ನು ಹುಟ್ಟುಹಾಕಿದೆ ಎಂದು ಎಸ್‌ಕೆಎಂ ಹೇಳಿದೆ.
Ministry of Agriculture and Farmers’ Welfare ಜೂನ್ 2017ರಲ್ಲಿ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ರೈತರ ಗುಂಪಿನ ಮೇಲೆ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಗುಂಡು ಹಾರಿಸಿದ ನಂತರ ಆರು ರೈತರು ಸಾವನ್ನಪ್ಪಿದ್ದರು.
ರದ್ದಾದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಕೆಎಂ, ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು ಮತ್ತು ರೈತರ ಆತ್ಮಹತ್ಯೆಯನ್ನು ಪರಿಹರಿಸಲು ಎನ್‌ಡಿಎ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದು, ಎಂಎಸ್‌ಪಿ ವಿಚಾರದಲ್ಲಿನ ಬಹುಕಾಲದ ಬೇಡಿಕೆಗಳನ್ನು ಪುನರುಚ್ಚರಿಸಿದೆ.