Wednesday, December 17, 2025
Wednesday, December 17, 2025

B. Y. Vijayendra ಪೆಟ್ರೋಲ್- ಡಿಸೆಲ್ ದರ ಇಳಿಸುವವರೆಗೆ ಬಿಜೆಪಿಯ ಹೋರಾಟ ನಿಲ್ಲದು- ಬಿ.ವೈ.ವಿಜಯೇಂದ್ರ

Date:

B. Y. Vijayendra ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಪಕ್ಷದ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ.

ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ, ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಈ ಬೆಲೆ ಏರಿಕೆಯ ಬಿಸಿ ಪಂಪ್ ಸೆಟ್, ಟ್ರಾಕ್ಟರ್ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ. ಅದರ ಜೊತೆಗೆ ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

B. Y. Vijayendra ರಾಜ್ಯದ ಸಂಪನ್ಮೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನ್ಮೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ, ಈ ಕೂಡಲೇ ಪೆಟ್ರೋಲ್ – ಡೀಸೆಲ್ ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್ ಪಡೆಯದಿದ್ದರೆ ಬಿಜಿಪಿ ಪಕ್ಷವು ದರ ಹಿಂಪಡೆಯುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ಎಚ್ಚರಿಸ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ x ಖಾತೆಯಲ್ಲಿ‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...