Department of Education ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಮತ್ತು ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹೆಚ್ಚಿದ್ದು ಇದು ಆಘಾತಕಾರಿ ವಿಷಯವಾಗಿದೆ. ಮಕ್ಕಳನ್ನು ಈ ಎಲ್ಲ ಪಿಡುಗುಗಳಿಂದ ರಕ್ಷಿಸಲು ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಆರ್‌ಡಿಪಿಆರ್ ಸೇರಿದಂತೆ 10 ಇಲಾಖೆಗಳು ಅತ್ಯಂತ ಜವಾಬ್ದಾರಿಯಿಂದ ಮತ್ತು ಸಮನ್ವಯತೆ ಸಾಧಿಸಿ, ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ ಕೊಳ್ಳ ಸೂಚನೆ ನೀಡಿದರು.
ಆರ್‌ಟಿಇ-2006, ಪೋಕ್ಸೋ-2012 ಹಾಗೂ ಬಾಲನ್ಯಾಯ ಕಾಯ್ದೆ-2015 ರ ಅನುಷ್ಟಾನ ಕುರಿತು ಭಾಗೀದಾರರೊಂದಿಗೆ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆಯಿಂದಾಗಿಯೇ ಮಕ್ಕಳ ವಿರುದ್ದ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಆದ್ದರಿಂದ ಮಕ್ಕಳ ರಕ್ಷಣೆ ಸಂಬAಧ ಈ ಹತ್ತೂ ಇಲಾಖೆಗಳು ಪ್ರತಿ ತಿಂಗಳಿಗೆ ಓರ್ವ ಇಲಾಖೆ ನೋಡಲ್ ಇಲಾಖೆಯಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.
Department of Education ಶಾಲೆ ಬಿಟ್ಟ ಮಕ್ಕಳ ಸಂಖ್ಯೆ 112, ಇದರಲ್ಲಿ 15 ವರ್ಷ ಮೀರಿದವರು 58 ವಿದ್ಯಾರ್ಥಿಗಳು ಇದ್ದಾರೆ. ಕಳೆದ 90 ದಿನಗಳಲ್ಲಿ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳು, ಬಾಲ ಮಂದಿರ ಮತ್ತು ಅಂಗನವಾಡಿಗಳನ್ನು ಭೇಟಿ ನೀಡಿದ್ದೇನೆ. ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹೆಚ್ಚಿದೆ. ಸರ್ಕಾರಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಹಾಜರಾತಿ ಕುರಿತು ಸಮರ್ಪಕವಾದ ಮಾಹಿತಿಯನ್ನು ಶಿಕ್ಷಣ ಇಲಾಖೆಗೆ ನೀಡಬೇಕು. ಡ್ರಾಪ್‌ಔಟ್ ಮಕ್ಕಳನ್ನು ಶಾಲೆಗೆ ಬರುವಂತೆ ಮಾಡಬೇಕು. ಆಗ ಮಕ್ಕಳ ವಿರುದ್ದದ ಪ್ರಕರಣಗಳು ಕಡಿಮೆ ಆಗಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳ ಹಾಜರಾತಿಯನ್ನು ಪ್ರಾಮಾಣಿಕವಾಗಿ ಮತ್ತು ಸಮರ್ಪಕವಾಗಿ ನೀಡಬೇಕೆಂದು ಎಚ್ಚರಿಸಿದರು.
Department of Education ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹೆಚ್ಚಿದೆ- ಅಪರ್ಣಾ ಎಂ. ಕೊಳ್ಳ
Date: