Thursday, December 18, 2025
Thursday, December 18, 2025

K.B. Ashok Naik ವಿದ್ಯಾರ್ಥಿಗಳು ಸಾಂಸ್ಕೃತಿ, ಕ್ರೀಡಾ ವೇದಿಕೆಗಳ ಸದುಪಯೋಗ ಪಡೆಯಬೇಕು-ಕೆ.ಬಿ.ಅಶೋಕ್ ನಾಯಕ್

Date:

K.B. Ashok Naik  ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ. ಖಿನ್ನತೆಯಿಂದ ದೂರ ಉಳಿಯಬಹುದಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳಬೇಕು ಎಂದು ಅಕ್ಷರ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಕೆಬಿ ಅಶೋಕ್ ನಾಯಕಅವರು
ಶಿವಮೊಗ್ಗ ನಗರದ ಅಕ್ಷರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಯಲ್ಲಿ ಕಾಲೇಜು ಮಟ್ಟದಲ್ಲಿ ಸಿಗುವ ವೇದಿಕೆಗಳ, ಸಾಂಸ್ಕೃತಿಕ ಹಾಗೂ ಕ್ರೀಡಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯು ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರ ತವರೂರು. ಸಾಕಷ್ಟು ಜನರು ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಶಾಲಾ ಕಾಲೇಜಿನ ಹಂತದಿಂದಲೇ ಅಭ್ಯಾಸ ಆರಂಭಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಂಕಲ್ಪ ಮಾಡಬೇಕು ಎಂದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರದರ್ಶಿ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಸಾಂಸ್ಕೃತಿಕ ಸಂಘಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣವಾಗುವುದರ ಜೊತೆಗೆ ಅವರಲ್ಲಿರುವ ಭಯ ಹೊರಟು ಹೋಗುತ್ತದೆ ಹಾಗೂ ಅವರಿಗೆ ವೇದಿಕೆಯ ಅವಕಾಶ ಸಿಗುವುದರ ಜೊತೆಗೆ ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ಮಾಡಿದಂತಾಗುತ್ತದೆ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿ ಗಳಾಗಲು ವಿದ್ಯಾಭ್ಯಾಸದ ಜೊತೆಗೆ ಇಂಥ ಕಾರ್ಯಕ್ರಮಗಳು ತುಂಬಾ ಅಗತ್ಯ ಎಂದು ನುಡಿದರು
ಅಕ್ಷರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸುರೇಶ್ ಎಚ್ಆರ್ ಮಾತನಾಡಿ, ಕಾಲೇಜಿನ ಜೀವನವು ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ತರವಾಗಿದ್ದು, ಸಾಂಸ್ಕೃತಿಕ ವೇದಿಕೆಗಳಲ್ಲಿ ಭಾಗವಹಿಬೇಕು. ನಿಮ್ಮ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಹೇಳಿದರು.
K.B. Ashok Naik  ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಗಿರೀಶ್ ಹೆಚ್ ಟಿ. ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಅವಕಾಶಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅನೂಪ್ ರಾಜ್ ರವರು ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುವುದರ ಜೊತೆಗೆ ನಮ್ಮನ್ನು ಸದಾ ಲವಲವಿಕೆಯಿಂದ ಇಡಲು ಸ್ಪೂರ್ತಿಯಾಗುತ್ತದೆ ಇಂತಹ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ನುಡಿದರು ಜಿ.ವಿಜಯ್‌ಕುಮಾರ್ ಅವರು ಲಾವಣಿ, ಜಾನಪದ, ಹಳೇಯ ಕನ್ನಡ ಚಿತ್ರಗೀತೆಗಳನ್ನು ಹಾಡಿದರು.
ಸಮ್ರಿನ್ , ಗಿರೀಶ್, ಸುರೇಶ್ ಎಚ್.ಆರ್., ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...