McGann District Hospital ಶಿವಮೊಗ್ಗ ಜಿಲ್ಲಾ ಬಿಜೆಪಿಯ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಗ್ಯೂ, ಚಿಕೂನ್ ಗುನ್ಯಾ, ಜಿಕಾ ವೈರಸ್ ಜ್ವರದ ಬಗ್ಗೆ ವಿವರವಾಗಿ ಮಾಹಿತಿ ಪಡೆಯಲಾಯಿತು.
ಅವಶ್ಯಕವಿರುವ ತುರ್ತು ಕ್ರಮಗಳ ಬಗ್ಗೆ ಜಾರಿಗೆ ತರಲು ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ|| ತಿಮ್ಮಪ್ಪ ಅವರಿಗೆ ಆಗ್ರಹಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಆಸ್ಪತ್ರೆಯ ವಾರ್ಡಿನಲ್ಲಿ ಕಿಟಕಿಗಳಿಗೆ ಸೊಳ್ಳೆಪರದೆಗಳನ್ನ ಹಾಕಿಸುವುದು. ಆಸ್ಪತ್ರೆ ಆವರಣ ಹಾಗೂ ಸುತ್ತಮುತ್ತ ನೀರು ನಿಲ್ಲದೆ ಇರುವ ಹಾಗೆ ಕ್ರಮ ಕೈಗೊಳ್ಳುವುದು, ಕಾಂಗ್ರೆಸ್ ಗಿಡಗಳನ್ನು ತೆಗೆಸುವುದು, ಆಸ್ಪತ್ರೆ ಆವರಣದಲ್ಲಿ ಮತ್ತು ವಾರ್ಡಗಳಲ್ಲಿ ಕನಿಷ್ಠ ಐದು ಗಂಟೆಗಳಿಗೊಮ್ಮೆ ಫಾಗಿಂಗ್ ಮಾಡಿಸುವುದು (ಅಗತ್ಯ ಬಿದ್ದಲ್ಲಿ ಮಹಾನಗರ ಪಾಲಿಕೆ ಸಹಕಾರ ಪಡೆದು), ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಗೆ ಭೇಟಿ ನೀಡಿ ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಅವಶ್ಯಕತೆ ಇರುವ ವೈಟ್ ಪ್ಲೇಟ್‌ಲೆಟ್ಸ್ ಸಂಗ್ರಹದ ಬಗ್ಗೆ ಮಾಹಿತಿ ಪಡೆದು ಹಾಗೂ ಆಸ್ಪತ್ರೆಯ ಲ್ಯಾಬ್ ಗೂ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡುವ ಕಿಟ್ ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆಯಲಾಯಿತು.
McGann District Hospital ಈ ಸಂದರ್ಭದಲ್ಲಿ ಬಿಜೆಪಿಯ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ , ವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಡಾ|| ಸುರೇಶ್ , ವೈದ್ಯಕೀಯ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಡಾ|| ಹೇಮಂತ್‌ಕುಮಾರ್, ಪ್ರಕೋಷ್ಟಗಳ ಜಿಲ್ಲಾ ಸಂಯೋಜಕ ಹೃಷಿಕೇಶ್ ಪೈ, ಸಹ ಸಂಯೋಜ
ಡಾ|| ಶ್ರೀನಿವಾಸ್ ರೆಡ್ಡಿ , ಡಾ|| ಮರುಳಾರಾಧ್ಯ, ಡಾ|| ಗೌತಮ್ , ಡಾ|| ಸಂತೋಷ್ ಹಾಗೂ ಮುರಳೀಧರ್ ಉಪಸ್ಥಿತರಿದ್ದರು.