Aparna Anchor ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ (57) (ಜುಲೈ11) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ.
‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ ಪಡೆದಿದ್ದ ಅಪರ್ಣಾ ಅವರು, ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದರು.
ಸಿನಿಮಾ ಮತ್ತು ಧಾರಾವಾಹಿಗಳಲ್ಲಿಯೂ ನಟಿಸಿ ಅವರು ಖ್ಯಾತಿ ಪಡೆದಿದ್ದರು. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಕೂಡ ಅಪರ್ಣಾ ನಡೆಸಿಕೊಟ್ಟಿದ್ದರು. ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡ ಬರುವ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
1984ರಲ್ಲಿ ತೆರೆಕಂಡಿದ್ದ ಪುಟ್ಟಣ್ಣ ಕಣಗಾಲ್ ಅವರ ‘ಮಸಣದ ಹೂವು’ಚಿತ್ರದಲ್ಲಿ ಖ್ಯಾತ ನಟ ದಿವಂಗತ ಅಂಬರೀಶ್ ಹಾಗೂ ಜಯಂತಿಯ ಅವರ ಜೊತೆಗೆ ನಟಿಸುವ ಮೂಲಕ ಅಪರ್ಣಾ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು. ಆ ಬಳಿಕ 1989ರಲ್ಲಿ ನಿರೂಪಕಿಯಾಗಿ ಟಿವಿ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು.
90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದವರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. 1998ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
2013ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕೂಡ ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದರು.
ಸಿಎಂ ಸಂತಾಪ :
Aparna Anchor “ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾ