K Armstrong ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ನಿನ್ನೆ ಸಂಜೆ ಚೆನ್ನೈನಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯಿಂದ ವಶಪಡಿಸಿಕೊಂಡ ಬಂದೂಕಿನಿಂದ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದಾಗ ಘಠನೆ ನಡೆದಿದ್ದು, ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ತಿರುವೆಂಗಡಮ್ ಅವರನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. “ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಈ ತಿಂಗಳ ಆರಂಭದಲ್ಲಿ ಚೆನ್ನೈನಲ್ಲಿರುವ ಅವರ ಮನೆಯ ಸಮೀಪ ಆರು ಮಂದಿ ಬೈಕ್‌ನಲ್ಲಿ ಬಂದವರು ಕೊಂದಿದ್ದರು.
ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿನ ಅವರ ಮನೆಯ ಬಳಿ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಆತನ ಮೇಲೆ ಹಲ್ಲೆ ನಡೆಸಿ ನಂತರ ಪರಾರಿಯಾಗಿದ್ದಾರೆ. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ಕೆ ಆರ್ಮ್‌ಸ್ಟ್ರಾಂಗ್ ಅವರ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲಾದ ಶಂಕಿತರಲ್ಲಿ ತಿರುವೆಂಗಡಮ್ ಕೂಡ ಒಬ್ಬನಾಗಿದ್ದ.. ವಕೀಲರಾಗಿದ್ದ ಆರ್ಮ್‌ಸ್ಟ್ರಾಂಗ್ ಅವರು 2006 ರಲ್ಲಿ ಚೆನ್ನೈ ಕಾರ್ಪೊರೇಷನ್ ಕೌನ್ಸಿಲ್‌ಗೆ ಆಯ್ಕೆಯಾದರು. ಎರಡು ವರ್ಷಗಳ ಹಿಂದೆ ಚೆನ್ನೈನಲ್ಲಿ ಮೆಗಾ ರ್ಯಾಲಿಯನ್ನು ಆಯೋಜಿಸಿದ ನಂತರ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯನ್ನು ಆಹ್ವಾನಿಸಿದ ನಂತರ ಅವರು ಖ್ಯಾತಿಯನ್ನು ಗಳಿಸಿದರು.
K. Armstrong ದಾಳಿಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು
ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ನಾನು ರಾಜ್ಯ ಸರ್ಕಾರವನ್ನು ವಿಶೇಷವಾಗಿ ಮುಖ್ಯಮಂತ್ರಿಯನ್ನು ಒತ್ತಾಯಿಸುತ್ತೇನೆ. ವಿಶೇಷವಾಗಿ ದುರ್ಬಲ ವರ್ಗದವರು ಸುರಕ್ಷಿತವಾಗಿರಬೇಕು. ಸರ್ಕಾರ ಗಂಭೀರವಾಗಿರುತ್ತಿದ್ದರೆ ಆರೋಪಿಗಳನ್ನು ಬಂಧಿಸಲಾಗುತ್ತಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾವು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.
K. Armstrong ತಮಿಳುನಾಡು ಬಿಎಸ್ ಪಿ ಮುಖಂಡ ಆರ್ಮ್ ಸ್ಟ್ರಾಂಗ್ ಕೊಲೆ ಆರೋಪಿ ಪೊಲೀಸ್ ಎನ್‌ಕೌಂಟರ್ ಗೆ ಬಲಿ
Date: