Department of Education ಎಲ್ ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.
ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5 ರಿಂದ 7 ವರ್ಷ ನಿಗದಿ ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.
Department of Education 26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ.
ಹಾಗೆಯೇ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ. ಹೀಗಾಗಿ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ . 8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.