Vishveshvaraya Iron and Steel Plant ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆ ಹಾಗೂ ಕೆಲವು ಸ್ಥಳಗಳಲ್ಲಿ ಪೌರ ಕಾರ್ಮಿಕರನ್ನು ಬಳಸಿಕೊಂಡು ಮ್ಯಾನ್‌ಹೋಲ್ ಒಳಗಡೆ ಇಳಿದು ಕೆಲಸ ಮಾಡಿಸಿಕೊಳ್ಳುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ನಗರ ಯೋಜನಾ ಅಧಿಕಾರಿ ಅವರಿಗೆ ಸೂಚಿಸಿದರು.
ಅವರು ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್ ವೃತ್ತಿನಿಷೇಧ ಮತ್ತು ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Vishveshvaraya Iron and Steel Plant ಮುಂದಿನ ದಿನಗಳಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಉತ್ತೇಜಿಸುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಅನಿವಾರ್ಯವಾಗಲಿದೆ. ಭದ್ರಾವತಿಯ ಪೇಪರ್‌ಟೌನ್, ಹೊಸಮನೆ, ರಂಗಪ್ಪ ಸರ್ಕಲ್ ಮತ್ತು ಕೆಲವು ಪ್ರದೇಶಗಳ ನಿವಾಸಿಗಳು ಹಾಗೂ ನಗರದ ಕೆಲವು ಹೋಟೆಲ್ ಸೇರಿದಂತೆ ಕೆಲವು ವಾಣಿಜ್ಯ ಸಂಸ್ಥೆಗಳು ಮಲ-ಮೂತ್ರವನ್ನು ನೇರವಾಗಿ ಚರಂಡಿಗೆ ಬಿಟ್ಟು ವಾತಾವರಣ ಕಲುಷಿತ ಮಾಡುತ್ತಿರುವವರ ವಿರುದ್ಧ ಈಗಾಗಲೇ ಎಚ್ಚರಿಕೆಯ ನೋಟೀಸ್ ನೀಡುವಂತೆ ಸೂಚಿಸಲಾಗಿದೆ. ಮನೆಯ ಮಲಮೂತ್ರವನ್ನು ಚರಂಡಿಗೆ ಬಿಡದಂತೆ ನಿಯಂತ್ರಿಸುವಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಾಧ್ಯವಿರುವ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಭದ್ರಾವತಿ ನಗರಸಭೆಯ ಅಭಿಯಂತರರಿಗೆ ಸೂಚಿಸಿದರು.
Vishveshvaraya Iron and Steel Plant ನಿಷೇಧಿತ ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ಉತ್ತೇಜಿಸಿದರೆ ತೀವ್ರಕ್ರಮ- ಗುರುದತ್ತ ಹೆಗಡೆ
Date: