Sunday, December 7, 2025
Sunday, December 7, 2025

Bannerghatta Fortis Hospital ಹೆತ್ತಮಗನೇ ತನ್ನ ಯಕೃತ್ ಭಾಗ ಧಾನಮಾಡಿ ತಾಯಿಯ ಜೀವವುಳಿಸಿದ!

Date:

Bannerghatta Fortis Hospital ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.

ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್.ಬಿ. ಮತ್ತು ಡಾ ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಲಿವರ್ ಟ್ರಾನ್ಸ್ಪ್ಲಾಂಟ್ ಸರ್ಜನ್ ಡಾ. ಕಿಶೋರ್ ಜಿಎಸ್ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.

Bannerghatta Fortis Hospital ದೀರ್ಘಕಾಲದಿಂದ ಯಕೃತ್ನ ಕಾಯಿಲೆ ಇರುವ ಕಾರಣ ಅವರ ಯಕೃತ್ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್ನ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು.

ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್ಗೆ ಕೂಡಲೇ ಯಕೃತ್ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...