CM Siddharamaih ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸುವ ಕುತಂತ್ರ ಖಂಡಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಬಿಜೆಪಿ ಪಾದಯಾತ್ರೆ ನಡೆಸುತ್ತಿರುವುದು ಸರ್ಕಾರ ಬೀಳಿಸುವ ಹುನ್ನಾರ
ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಒಕ್ಕೂಟ ಮತ್ತು ಅಹಿಂದ ಒಕ್ಕ್ಕೂಟ ಹೇಳಿವೆ.
ಈ ಸಂಬಂಧ ಜಿಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಮುಖಂಡರು, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ನಿಗಮದ ಎಂಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ. ಹೀಗಿದ್ದರೂ ಸಿದ್ದರಾಮಯ್ಯ ಅವರನ್ನು ವಿನಾಕಾರಣ ಇದರಲ್ಲಿ ಸಿಲುಕಿಸುವ ಯತ್ನ ನಡೆದಿದೆ. ತಮ್ಮ ಮೇಲೆ ಆರೋಪ ಬಂದಾಗ ಸ್ವಂತ ಮುಖ್ಯಮಂತ್ರಿಗಳು ತನಿಖಾ ಆಯೋಗ ರಚಿಸಿದ್ದರೂ, ಬಿಜೆಪಿಯವರು ಸಲ್ಲದ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ದೇಶದ ಅತ್ಯುತ್ತಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸುದ್ದಿ ಸಂಸ್ಥೆಗಳೇ ವರದಿ ಮಾಡಿವೆ. ಸಿದ್ದರಾಮಯ್ಯ ವಿರುದ್ಧದ ಷಡ್ಯಂತರ ಇಲ್ಲಿಗೆ ನಿಲ್ಲಬೇಕು.
CM Siddharamaih ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಶೀಘ್ರದಲ್ಲಿಯೇ ರಾಜ್ಯಮಟ್ಟದ ಶೋಷಿತರ ಅಹಿಂದ ಮತ್ತು ಹಿಂದುಳಿದ ವರ್ಗದವರ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂಧು ಹೇಳಿದರು.
ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಅಹಿಂದ ಕಾರ್ಯದರ್ಶಿ ಎಸ್ ಪಿ ಶೇಷಾದ್ರಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಇಕ್ಕೇರಿ ರಮೇಶ್ ವಹಿಸಿದ್ದರು.