Saturday, November 23, 2024
Saturday, November 23, 2024

Madhu Bangarappa ನದಿ ಯೋಜನೆಗಳ ಹಿನ್ನೆಲೆ ಭೂಮಿ ಕಳೆದುಕೊಂಡವರ ಪರ & ಸರ್ಕಾರದ ಪರ ದಾವೆ ಹೂಡಲು ಉದ್ದೇಶಿಸಲಾಗಿದೆ – ಸಚಿವ ಮಧು ಬಂಗಾರಪ್ಪ

Date:

Madhu Bangarappa ಶರಾವತಿ, ವರಾಹಿ, ಸಾವೆಹಕ್ಲು ಮತ್ತು ಚಕ್ರಾ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಮನೆ, ಭೂಮಿ ಕಳೆದುಕೊಂಡು ನಿರಾಶ್ರಿತರಾದವರ ಪರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಹಾಗೂ ನಿರಾಶ್ರಿತರ ಪರವಾಗಿ ದಾವೆ ಹೂಡಲು ಸಮರ್ಥ ವಕೀಲರನ್ನು ನೇಮಿಸಲು ಉದ್ದೇಶಿಸಲಾಗಿದೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಜನಪ್ರತಿನಿಧಿಗಳು ಸಹಕಾರ ನೀಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಮನವಿ ಮಾಡಿದರು.

ಶಿವಮೊಗ್ಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ನಿರಂತರವಾಗಿರುವ ಮುಂಗಾರು ಮಳೆಯಿಂದ ರಾಜ್ಯದಲ್ಲಿನ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ರೈತರಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಅತೀವೃಷ್ಟಿಯಿಂದಾಗಿ ತಪ್ಪಲು ಪ್ರದೇಶಗಳಲ್ಲಿ ಭೂಕುಸಿತ ಪ್ರಕರಣಗಳು ಕಂಡುಬಂದಿವೆ. ಕೆರೆ-ಕಟ್ಟೆ-ಕಾಲುವೆಗಳು ಹಾನಿಗೊಳಗಾಗಿವೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಹುಕಾಲದಿಂದ ಅರಣ್ಯಭೂಮಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದಂತೆ ಹಾಗೂ ಅವರ ರಕ್ಷಣೆಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಿದೆ. ಅನಾದಿಕಾಲದಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.

ಆದರೆ, 2015ರಿಂದ ಇತ್ತೀಚೆಗೆ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರ ಪರವಾಗಿ ಸರ್ಕಾರ ರಕ್ಷಣೆ ಒದಗಿಸುವುದು ಅರಣ್ಯ ಕಾನೂನಿನ ದೃಷ್ಟಿಯಿಂದ ಕಷ್ಟಸಾಧ್ಯವಾಗಲಿದೆ ಎಂದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಅಲ್ಲದೇ ಪ್ರತಿದಿನ ಮಾಹಿತಿ ಪಡೆದು, ಅಗತ್ಯವಾಗಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಳೆಯಿಂದ ಮನೆಹಾನಿಯಾಗಿರುವ ಕೆಲವು ಕಡೆಗಳಲ್ಲಿ ಪರ್ಯಾಯವಾಗಿ ತಾತ್ಕಾಲಿಕ ಊಟ ಮತ್ತು ವಸತಿ ಸೌ¯ಭ್ಯವನ್ನು ಒದಗಿಸುವ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ ಎಂದರು.

Madhu Bangarappa
ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಿಂದ ಭಾಗಶಃ ಹಾನಿಗೊಳಗಾಗಿರುವ ಅಧಿಕೃತ ಹಾಗೂ ಅನಧಿಕೃತ ಮನೆಗಳ ಮಾಲೀಕರಿಗೆ ಕೇಂದ್ರ ಸರ್ಕಾರದ 6500/-ರೂ.ಗಳ ನೆರವು ಅತ್ಯಲ್ಪವಾಗಿದ್ದು, ರಾಜ್ಯ ಸರ್ಕಾರವು ಅದಕ್ಕೆ ಹೆಚ್ಚುವರಿಯಾಗಿ 43,500/-ಗಳನ್ನು ಸೇರಿಸಿ, ಒಟ್ಟು 50,000-ರೂ.ಗಳನ್ನು ನೀಡುತ್ತಿದೆ ಎಂದರು.

ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವವರಿಗೆ ಸರ್ಕಾರದ ವತಿಯಿಂದ 1.20ಲಕ್ಷ ರೂ.ಗಳ ತುರ್ತು ನೆರವಿನ ಜೊತೆಗೆ ಸ್ಥಳೀಯ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳಿಂದ ನೆರವನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ.
ವಿಶೇಷವಾಗಿ ಸಂಪೂರ್ಣ ನಾಶವಾಗಿರುವ ಅಧಿಕೃತ ಅಥವಾ ಅನಧಿಕೃತ ಮನೆಗಳ ಮಾಲೀಕರಿಗೆ ಸರ್ಕಾರದಿಂದಲೇ ಹೊಸ ಮನೆಯನ್ನು ಕಟ್ಟಿಸಿಕೊಡಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದವರು ನುಡಿದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಸೇವೆ ಒದಗಿಸಲು ಪ್ರತಿಷ್ಟಿತ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ 1500 ಕೋಟಿ ರೂ.ಗಳ ಆರ್ಥಿಕ ಸಹಕಾರ ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಇಂತಹ ಅಸಂಖ್ಯಾತ ದಾನಿಗಳು ಸಹಾಯಹಸ್ತ ನೀಡುವುದಾಗಿ ತಿಳಿಸಿರುವುದು ಇನ್ನಷ್ಟು ರಚನಾತ್ಮಕ ಕಾರ್ಯ ಕೈಗೊಳ್ಳಲು ಆನೆಬಲ ಬಂದಂತಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಚೇರಿಗಳು, ಅಂಗನವಾಡಿ ಮತ್ತು ಶಾಲಾ ಕಟ್ಟಡಗಳ ದುರಸ್ತಿಗೆ ಸರ್ಕಾರದ ವತಿಯಿಂದ ಕ್ರಮ ವಹಿಸಲಾಗುತ್ತಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ಕಾರ್ಯ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮುಖಂಡರಾದ ಆರ್.ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಡಾ|| ಆರ್.ಎಂ.ಮಂಜುನಾಥಗೌಡ, ಎಸ್.ಕೆ.ಮರಿಯಪ್ಪ, ಚಂದ್ರಭೂಪಾಲ್, ಕಲೀಂ, ರಮೇಶ್, ಶಿವಾನಂದ್, ವಿಜಯಕುಮಾರ್, ರಮೇಶ್‌ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...