Saturday, November 23, 2024
Saturday, November 23, 2024

Renukadevi Temple Chandragutti ಚಂದ್ರಗುತ್ತಿ ದೇವಿಯ ದೇಗುಲ ಅಭಿವೃದ್ಧಿಗೆ ಶೀಘ್ರ ಯೋಜನೆ. ಯಾತ್ರಾರ್ಥಿಗಳಿಗೆ ಸೌಲಭ್ಯಗಳ ವ್ಯವಸ್ಥೆ- ಮಧು ಬಂಗಾರಪ್ಪ

Date:

Renukadevi Temple Chandragutti ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು.

ಸೊರಬ ಸಮೀಪದ ಚಂದ್ರಗುತ್ತಿಯ ಶ್ರೀ ರೇಣುಕಾದೇವಿಯ ದರ್ಶನ ಪಡೆದ ನಂತರ ಅವರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದರು.

ಶ್ರೀ ಕ್ಷೇತ್ರದಲ್ಲಿನ ಸ್ವಚ್ಛತೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಸತಿ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದ ಅವರು ಯತ್ರಾರ್ತಿಗಳ ಅನುಕೂಲಕ್ಕಾಗಿ ತುರ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸ್ತುತ ಸಂದರ್ಭದಲ್ಲಿ ಸ್ಥಿತವಾಗಿರುವ ಹಾಗೂ ಪಾರಂಪರಿಕವಾಗಿರುವ ಮೂಲ ಕಟ್ಟಡವು ಶಿಥಿಲಗೊಂಡಿದೆ ಮಾತ್ರವಲ್ಲದೆ ಮಳೆಯಿಂದ ಸೋರುತ್ತಿದೆ. ದೇವಸ್ಥಾನದ ಬಾಗಿಲುಗಳು ಸಡಿಲಗೊಂಡಿವೆ. ಅದರ ತುರ್ತು ಕಾರ್ಯವನ್ನು ಕೈಗೊಳ್ಳಲು ಭಾರತೀಯ ಪರಂಪರಿಕ ಕಟ್ಟಡಗಳ ನಿರ್ವಹಣಾ ಸಮಿತಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಲ್ಲದೆ ಕೈಗೊಳ್ಳಬಹುದಾದ ತುರ್ತು ಕಾಮಗಾರಿಗಳಿಗೆ ಆರ್ಥಿಕ ನೆರವನ್ನು ಸರ್ಕಾರ ಅಥವಾ ಸ್ಥಳೀಯ ಆಡಳಿತ ಅಧಿಕಾರಿಗಳ ಕಚೇರಿಯಿಂದ ಒದಗಿಸಿಕೊಡಲಾಗುವುದು ಎಂದವರು ನುಡಿದರು.

ಪ್ರಸ್ತುತ ದೇವಸ್ಥಾನದ ಮೂಲ ಕಟ್ಟಡದ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೊಳ ಪಟ್ಟಿದೆ. ಅದಕ್ಕಾಗಿ ನಿಯಮಾನುಸಾರ ಇಲಾಖೆಯ ಅನುಮತಿ ಪಡೆದು ಕಟ್ಟಡದ ಜೀರ್ಣೋದ್ದಾರಕ್ಕೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನದ ಸುತ್ತಮುತ್ತಲ 10 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ ಈ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ನೆರಳು, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸೂಚಿಸಲಾಗಿದೆ ಎಂದರು.

ದೇವಸ್ಥಾನದ ಸುತ್ತಮುತ್ತಲ ಹತ್ತು ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಪಡೆದುಕೊಂಡ ನಂತರ ಅದಕ್ಕೆ ಪರ್ಯಾಯವಾಗಿ 20 ಎಕರೆ ಭೂಪ್ರದೇಶವನ್ನು ಅರಣ್ಯ ಇಲಾಖೆಗೆ ವಹಿಸಿಕೊಡಲಾಗುವುದು ಎಂದರು.

ಪ್ರಸ್ತುತ ಈ ಪಾರಂಪರಿಕ ಕಟ್ಟಡದಲ್ಲಿ ಗುರುತಿಸಲಾಗಿರುವ ತುರ್ತು ಕಾಮಗಾರಿಗಳನ್ನು ರಾಷ್ಟ್ರೀಯ ಪ್ರಾಚ್ಯ ವಸ್ತು ಇಲಾಖೆಯಿಂದ ಹಾಗೂ ಉಳಿದಂತೆ
ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿನ ಮೆಟ್ಟಿಲುಗಳ ದುರಸ್ತಿ, ನೆರಳು ಹಾಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಾಮಗಾರಿಗಳನ್ನು ಆಡಳಿತಾಧಿಕಾರಿಗಳ ಕಚೇರಿಯಿಂದ ನಿರ್ವಹಿಸಲಾಗುವುದು ಎಂದ ಅವರು ನೆರಳಿಗಾಗಿ ನಿರ್ಮಿಸುವ ಶೆಲ್ಟರ್ ಗಳನ್ನು ಕಾಲಮಾನ ಕನುಗುಣವಾಗಿ ಅಳವಡಿಸಲು ಹಾಗೂ ತೆರವುಗೊಳಿಸಲು ಅನುಕೂಲವಾಗುವಂತೆ ನಿರ್ಮಿಸಲಾಗುವುದು ಎಂದರು.

Renukadevi Temple Chandragutti ಈ ದೇಶದಲ್ಲಿ ನಿತ್ಯ ಪೂಜಾ ಕೈಂಕರ್ಯಗಳು ನಿರಂತರವಾಗಿರುವಂತೆ ನೋಡಿಕೊಳ್ಳಲು ಯಾಗ ಶಾಲೆಯನ್ನು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲು ಸೂಚಿಸಲಾಗಿದೆ ಎಂದವರು ನುಡಿದರು.

ದೇವಸ್ಥಾನಕ್ಕೆ ಬರುವ ಯಾತ್ರೆ ಗಳ ಅನುಕೂಲಕ್ಕೆ ಅಲ್ಲಲ್ಲಿ ಮಾರ್ಗಸೂಚಿಗಳನ್ನು, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡುವ ಭಕ್ತಾದಿಗಳ ಪಾದರಕ್ಷಗಳನ್ನು ಕೌಂಟರ್ ಗಳನ್ನು ತೆರೆಯಲು ಸೂಚಿಸಿದ ಅವರು ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ಪ್ರತ್ಯೇಕ ಕೊಠಡಿಯೊಂದನ್ನು ನಿರ್ಮಿಸಲು ಸೂಚಿಸಿದರು.

ಪ್ರಸ್ತುತ ಈಗಿರುವ ಶೌಚಾಲಯಗಳ ಸಂಖ್ಯೆ ಅತ್ಯಂತ ಕನಿಷ್ಠ ವಾಗಿದ್ದು ಮಹಿಳೆಯರು ಹಾಗೂ ಪುರುಷರ ಅನುಕೂಲಕ್ಕಾಗಿ ಪ್ರತ್ಯೇಕವಾಗಿ 25 ಶೌಚ ಹಾಗೂ ಸ್ನಾನ ಗ್ರಹಗಳನ್ನು ನಿರ್ಮಿಸಲು ಸೂಚಿಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಆಡಳಿತಾಧಿಕಾರಿಗಳ ಕಾರ್ಯಾಲಯದಿಂದ ಕೇವಲ ಆದಾಯ ನಿರೀಕ್ಷೆಕ್ಕೆ ಗಮನ ಹರಿಸಿದೆ ಜನರಿಗೆ ಸೌಲಭ್ಯ ಕಲ್ಪಿಸಿಕೊಡಲು ಹಣಕಾಸಿನ ಅಗತ್ಯವಿದ್ದಲ್ಲಿ ಸರ್ಕಾರದ ನೆರವನ್ನು ಒದಗಿಸಲಾಗುವುದು ಎಂದರು.

ದೇವರ ದರ್ಶನಕ್ಕಾಗಿ ಬರುವ ಯಾತ್ರಾತಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ವಾಹನಗಳ ನಿಲುಗಡೆಗೆ, ಜನರ ವಸತಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳಲು ಆಡಳಿತ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳು ಗಮನಹರಿಸುವಂತೆ ಸೂಚಿಸಿದ ಅವರು ಪರಸ್ಪರರಲ್ಲಿ ಸಮನ್ವಯತೆ ಇರಬೇಕು ಎಂದವರು ನುಡಿದರು.

ಈ ಪುಣ್ಯ ಭೂಮಿಗೆ ಬಂದು ದೇವರ ದರ್ಶನ ಪಡೆಯುವ ಯತ್ರಾರ್ತಿಗಳಿಗೆ ಧನ್ಯತಾಭಾವ ಮೂಡಬೇಕು ಅಂತಹ ವಾತಾವರಣ ಇಲ್ಲಿ ನಿರ್ಮಾಣಗೊಳ್ಳಬೇಕು ಎಂದು ಅವರು ಮುಂದಿನ ದಿನಗಳಲ್ಲಿ ಸರ್ಕಾರದಿಂದಲೇ ಪ್ರಾಧಿಕಾರ ರಚಿಸಿ ನಿರ್ವಹಣೆಗೆ ಕ್ರಮ ವಹಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯಿಂದಾಗಿ ಕೆರೆಕಟ್ಟೆ ಕಾಲ್ವೆಗಳು ಅಲ್ಲಲ್ಲಿ ಹಾಳಾಗಿದ್ದು ಅವುಗಳನ್ನು ದುರಸ್ತಿಗೊಳಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು. ಸೊರಬ, ಜಡೆ ಹಾಗೂ ಆನವಟ್ಟಿಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಶೀಘ್ರದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಹಾಗೆಯೇ ಕೊರತೆ ಇರುವ ಎಲ್ಲ ತಜ್ಞ ವೈದ್ಯರುಗಳು ಹಾಗೂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರನ್ನು ಮುಂದಿನ ಒಂದು ತಿಂಗಳೊಳಗಾಗಿ ನೇಮಿಸಲಾಗುವುದು ಎಂದವರು ನುಡಿದರು.

ಸಭೆಯಲ್ಲಿ ಸಾಗರದ ಒಬ್ಬ ವಿಭಾಗಾಧಿಕಾರಿ ಯತೀಶ್, ತಹಶೀಲ್ದಾರ್ ಶ್ರೀಮತಿ ಮಂಜುಳಾ ಹೆಗಡಾಳ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ಸರಿತಾ, ಉಪಾಧ್ಯಕ್ಷ ರೇಣುಕಾ ಪ್ರಸಾದ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...