Saturday, March 28, 2026
Saturday, March 28, 2026

Astronaut Sunita Williams ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸುರಕ್ಷಿತ ಧರೆಗೆ ಬರಲು ಪ್ರಾರ್ಥನೆ

Date:

Astronaut Sunita Williams ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಪ್ರಾರ್ಥಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪಟ್ಟಣದ ದಂಡಾವತಿ ಬ್ಲಾಕ್‌ನಲ್ಲಿರುವ ನದಿಕಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಜೂ.೫ರಂದು ಭೂಮಿಯಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ತೆರಳಿದ್ದ ಭಾರತ ಮೂಲದ ಖಗೋಳ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಹಿಂದಿರುವುದು ಕಷ್ಟಕರವಾಗಿದೆ. ಅವರ ವಾಹನದಲ್ಲಿ ಹಲವು ತಾಂತ್ರಿಕ ದೋಷಗಳು ಕಾಣ ಸಿಕೊಂಡಿವೆ. ಆದ್ದರಿಂದ ಅವರು ಭೂಮಿಗೆ ತೆರಳದೇ ಅಲ್ಲೇ ಉಳಿಯುವಂತಾಗಿದೆ. ಎರಡು ಬಾರಿ ಯಶಸ್ವಿಯಾಗಿ ಗಗನಯಾತ್ರೆ ಮಾಡಿದಾಗ ಇಡೀ ದೇಶವೇ ಸಂಭ್ರಮಿಸಿತ್ತು. ಮೂರನೇ ಬಾರಿಗೆ ಮತ್ತೋರ್ವ ಖಗೋಳ ವಿಜ್ಞಾನಿ ಬುಚ್ ವಿಲ್ಮೋರ್ ಅವರೊಂದಿಗೆ ಭೂಮಿಗೆ ಜೂನ್ ೧೪ರಂದು ವಾಪಾಸ್ಸಾಗಬೇಕಿತ್ತು. ಆದರೆ, ಈಗಾಗಲೇ ಎರಡು ತಿಂಗಳು ಹೆಚ್ಚುವರಿಯಾಗಿದೆ ಎಂದು ತಿಳಿಸಿದರು.
Astronaut Sunita Williams ಖಗೋಳಾಸಕ್ತರಿಗೆ ಸಾಮಾನ್ಯವಾದ ಪ್ರವಾಸದಂತೆ ಬಾಹ್ಯಕಾಶಕ್ಕೆ ಕರೆದುಕೊಂಡು ಹೋಗಿ ಅಂತಾರಾಷ್ಟ್ರೀಯ ಬಾಹ್ಯಕಾಶದಲ್ಲಿ ಕೆಲ ದಿನಗಳು ಉಳಿದು ಪುನಃ ಭೂಮಿಗೆ ಹಿಂದಿರುಗುವ ರೋಮಾಂಚನ ನೀಡುವ ಉದ್ದೇಶದಿಂದ ಯೋಜನೆ ರೂಪಿತವಾಗಿತ್ತು. ಇದರಿಂದ ಖಗೋಳಾಸಕ್ತರಿಗೆ ಮತ್ತಷ್ಟು ಮಾಹಿತಿ ಲಭ್ಯವಾಗುತ್ತಿತ್ತು. ಪ್ರಾಯೋಗಿಕವಾಗಿ ನಡೆದ ಯೋಜನೆಯಲ್ಲಿ ಸುನಿತಾ ವಿಲಿಯಮ್ಸ್ ಸಿಲುಕಿದ್ದಾರೆ. ಅವರು ಸುರಕ್ಷಿತವಾಗಿ ಭೂಮಿಗೆ ಹಿಂದಿರಗಬೇಕು. ದೇಶಕ್ಕೆ ಮತ್ತಷ್ಟು ಕೀರ್ತಿ ತರಬೇಕು ಎಂದು ಪ್ರಾರ್ಥಿಸಿ ಪವನಸುತ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸುಮನಾ ಬಿ. ಗೌಡ, ಜೆ.ಸಿ. ಮುರಳೀಧರ ಗುಡಿಗಾರ್, ರಾಮಚಂದ್ರ ಆಚಾರ್, ನಿರಂಜನಗೌಡ ಹಳೇಸೊರಬ, ಶಾಂತಕುಮಾರ್ ಮರೂರು, ಎಂ.ಎಸ್. ಸಂಜಯ, ಅರ್ಚಕ ಭಾರ್ಗವ ಗೋಖಲೆ ಸೇರಿದಂತೆ ಇತರರಿದ್ದರು.
ಫೋಟೋ
೧೯ ಸೊರಬ ೦೧: ಸೊರಬ ಪಟ್ಟಣದ ದಂಡಾವತಿ ಬ್ಲಾಕ್‌ನಲ್ಲಿರುವ ನದಿಕಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...