Kimmane Ratnakar ಈ ದೇಶವು ಪ್ರಜಾಪ್ರಭತ್ವ ಮತ್ತು ಸಂವಿಧಾನದ ಅಡಿಯಲ್ಲಿ ನಿರ್ಮಾಣವಾಗಿದ್ದು, ರಾಜ್ಯಪಾಲರು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಈ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ನಂತರ ತಾಲೂಕು ಕಚೇರಿ ಎದುರು ಮಾತನಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿ ರಾಜ್ಯಪಾಲರು ಅನಗತ್ಯವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದರು.
ಈ ಪ್ರಕರಣ ರಾಜಕೀಯ ಒಳಗೊಂಡಂತೆ ಕಾಣುತ್ತಿದೆ. ಭಾರತದ ಸ್ವಾತಂತ್ರ್ಯ ದಿನದ ಮರು ದಿನವೇ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದು ಒಂದು ಷಡ್ಯಂತ್ರದ ಭಾಗವಾಗಿದ್ದು, ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ.
Kimmane Ratnakar ಹಾಗಾಗಿ ರಾಷ್ಟ್ರಪತಿ ತತ್‌ಕ್ಷಣದಲ್ಲಿ ಮಧ್ಯಸ್ಥಿಕೆ ವಹಿಸಿ ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯುವಂತೆ ತಿಳಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಕೆಸ್ತೂರ್ ಮಂಜುನಾಥ್, ಡಿ.ಎಸ್.ವಿ.ಶೆಟ್ಟಿ, ಅಮರನಾಥ್ ಶೆಟ್ಟಿ, ಟಿ.ಎಲ್.ಸುಂದರೇಶ್, ರೆಹಮತ್ ಆಜಾದಿ, ಉದಯ್ ಕುಮಾರ್, ಪ.ಪಂ.ಸದಸ್ಯರಾದ ಗೀತಾ ರಮೇಶ್, ಸುಶೀಲಾ ಶೆಟ್ಟಿ, ಮಂಜುಳಾ ನಾಗೇಂದ್ರ ಮುಂತಾದವರಿದ್ದರು.