High Court 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನೌಕರರು ಖಾಯಂಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂಬ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಈ ನೌಕರರು ಖಾಯಂಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತು.
ಸೇವೆ ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ನೀಡಿದ್ದ ಹಿಂಬರವನ್ನು ಪ್ರಶ್ನಿಸಿ ಮೈಸೂರಿನ ಶಾಂತಲಕ್ಷ್ಮಿ ಹಾಗೂ ಇತರರು ಹೈಕೋರ್ಟ್ ಗೆ ಪ್ರತ್ಯೇಕವಾಗಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು.
High Court ಅರ್ಜಿದಾರರು 10 ವರ್ಷಗಳಿಗೂ ಅಧಿಕ ಕಾಲ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ/ ಭತ್ಯೆಗಳನ್ನು ನೀಡಬೇಕಾಗುತ್ತದೆ. ಹಾಗಾಗಿ, ಉಮಾದೇವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಇವರು ಸೇವೆ ಖಾಯಂಗೆ ಅರ್ಹರು” ಎಂದು ತಿಳಿಸಿದೆ.
ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದ ಅರ್ಜಿದಾರರನ್ನು ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಹಿಂಬರಹನೀಡಿದ್ದವು. ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದ ಸರ್ಕಾರ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅರ್ಜಿದಾರರನ್ನು ಮಂಜೂರಾದ ಹುದ್ದೆಗಳಿಗೆ ನೇಮಕ ಮಾಡಿಕೊಂಡಿರಲಿಲ್ಲ. ಬದಲಿಗೆ ಅವರನ್ನು ಮಂಜೂರಾಗದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ನ್ಯಾಯಾಲಯಗಳ ಅದೇಶದಿಂದಾಗಿ ಅರ್ಜಿದಾರರನ್ನು 10 ವರ್ಷಕ್ಕೂ ಅಧಿಕ ಸಮಯದಿಂದ ದಿನಗೂಲಿ ಸೇವೆಯಲ್ಲಿ ಮುಂದುವರಿಸಲಾಗಿದೆ.
ಹಾಗಾಗಿ ಅವರು ಸೇವೆ ಕಾಯಂಗೆ ಅನರ್ಹರು ಎಂದು ವಾದಿಸಿತ್ತು.