Monday, March 23, 2026
Monday, March 23, 2026

Agnipath Yojana ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಸಂಬಂಧಿಸಿದ ದೈಹಿಕ ಕ್ಷಮತೆ & ವೈದ್ಯಕೀಯ ಪರೀಕ್ಷೆಗಳು ಆ.31 ರವರೆಗೆ ಆಯೋಜನೆ

Date:

Agnipath Yojana ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತಾ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಆಗಸ್ಟ್ ೨೨ರಿಂದ ೩೧ರವರೆಗೆ ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಗುವುದು ಎಂದು ಕರ್ನಲ್ ಕೃಷ್ಣನ್ ಕಶ್ಯಪ್ ಹೇಳಿದರು.

ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್‍ಯಾಲಿಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.
. ಈ ರ್‍ಯಾಲಿಯಲ್ಲಿ ಮಂಗಳೂರು ಸೈನಿಕ ನೇಮಕಾತಿ ಘಟಕವು ಈಗಾಗಲೆ ನಡೆಸಿದ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಒಟ್ಟು ೧೧ ಜಿಲ್ಲೆಗಳ ಅಭ್ಯರ್ಥಿಗಳ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಈಗಾಗಲೆ ರವಾನಿಸಲಾಗಿದ್ದು, ಪ್ರತಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದಿನಾಂಕವನ್ನು ನಿಗಧಿಗೊಳಿಸಲಾಗಿದೆ ಎಂದರ.
ನೇಮಕಾತಿಗೆ ಪೂರಕವಾಗಿ ನಿಯಮಾನುಸಾರ ಅಭ್ಯರ್ಥಿಯು ಹೊಂದಿರುವ ದೈಹಿಕ ಸಾಮರ್ಥ್ಯವನ್ನು ಧೃಡೀಕರಿಸುವ ಕ್ರೀಡೆ, ಚಟುವಟಿಕೆ ನಡೆಸಲಾಗುವುದು ಎಂದ ಅವರು, ಪ್ರತಿದಿನ ೮೦೦-೯೦೦ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕಳೆದ ಸಾಲಿನಲ್ಲಿ ನೆರೆಯ ಹಾವೇರಿ ಜಿಲ್ಲೆಯಲ್ಲಿ ನೇಮಕಾತಿ ರ್‍ಯಾಲಿಯನ್ನು ಆಯೋಜಿಸಲಾಗಿತ್ತು. ಆಯ್ಕೆ ಬಯಸಿ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನೀರು, ಶೌಚ ಹಾಗೂ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

Agnipath Yojana ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಮತ್ತು ಕ್ರೀಡಾ ಚಟುವಟಿಕೆಗಳೊಂದಿಗೆ ದಾಖಲಾತಿಗಳ ಪರಿಶೀಲನೆಯೂ ಇದೇ ಆವರಣದಲ್ಲಿ ನಡೆಯಲಿದೆ. ಅದಕ್ಕಾಗಿ ಸಂಬಂಧಿತ ಇಲಾಖೆಗಳ ಸ್ಥಳೀಯ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದ ಅವರು ಆಗಸ್ಟ್ ೨೩ರಂದು ಬೆಳಿಗ್ಗೆ ೬.೩೦ಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಈ ಎಲ್ಲಾ ನೇಮಕಾತಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರವಿದೆ. ಅದಕ್ಕಾಗಿ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಅದರ ಸಮಗ್ರ ಉಸ್ತುವಾರಿಗಾಗಿ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸೈನಿಕ ಅಧಿಕಾರಿ ದುರ್ಗಾಪ್ರಸಾದ್ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ|| ಹಿರೇಮಠ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...