Lingayat and Veerashaiva Thinkers’ Forum ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರ ತ್ಯಾಗ ಮತ್ತು ಬಲಿದಾನವಿದೆ. ಸ್ವಾತಂತ್ರ್ಯ ಯೋರ ಜೀವನ ಮತ್ತು ಸಂದೇಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯ ಕರ್ನಾಟಕ ಅಧ್ಯಕ್ಷ ಸಿ.ಪಿ. ಈರೇಶ್ ಗೌಡ ಹೇಳಿದರು.
ಸೊರಬ ಪಟ್ಟಣದ ಹಳೇ ಸೊರಬ ಹೊಸಪೇಟೆ ಬಡಾವಣೆಯಲ್ಲಿರುವ ನವಚೇತನ ಬುದ್ದಿಮಾಂದ್ಯ ವಸತಿ ಶಾಲೆಯಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆ ವತಿಯಿಂದ ಭಾರತ ಸ್ವಾತಂತ್ರö್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಬಾಲ್ಯದಲ್ಲಿಯೇ ದೇಶ ಭಕ್ತಿಯನ್ನು ಕಲಿಸಬೇಕು. ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿದ್ದಾರೆ. ದೇಶ ನಮಗೇನು ನೀಡಿದೆ ಎನ್ನುವುದಕ್ಕಿಂತ ದೇಶಕ್ಕೆ ನಮ್ಮ ಕೊಡುಗೆ ನೀಡಬೇಕು ಎಂದ ಅವರು, ಸಾಮಾನ್ಯ ಮಕ್ಕಳಿಗೆ ಶಿಕ್ಷಣ ನೀಡುವುದೇ ಸವಾಲಿನ ಕೆಲಸ ಆದರೆ, ಬುದ್ದಿಮಾಂದ್ಯ ಮಕ್ಕಳನ್ನು ಸಾಮಾನ್ಯ ಮಕ್ಕಳನ್ನಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಅವಿರತವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ. ಇಂತಹ ಶಾಲೆಯಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆಯವರು ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಯಾಗಿದೆ ಎಂದರು.
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ ಮಾತನಾಡಿ, ಸ್ವಾತಂತ್ರ್ಯ ಎಂಬುದು ಸುಲಭವಾಗಿ ಸಿಕ್ಕಿದ್ದಲ್ಲ. ಅನೇಕ ಹೋರಾಟಗಳು ನಡೆದಿದೆ. ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಸ್ವಾತಂತ್ರ್ಯ ಮಹತ್ವವನ್ನು ತಿಳಿಸಿಕೊಡಬೇಕು. ದೇಶದಲ್ಲಿ ಶಾಂತಿ ನೆಲೆಸಲು ಪ್ರಸ್ತುತ ಗಡಿಯಲ್ಲಿ ಸೈನಿಕರು ನಿತ್ಯವೂ ಹಗಲು ಮತ್ತು ಇರುಳು ಎನ್ನದೇ ಸೇವೆ ಸಲ್ಲಿಸುತ್ತಿದ್ದಾರೆ. ಬುದ್ದಿಮಾಂದ್ಯ ಮಕ್ಕಳು ಎನ್ನುವುದಕ್ಕಿಂತ ಅವರು ದೇವರ ಮಕ್ಕಳು. ಮುಂದಿನ ದಿನಗಳಲ್ಲಿ ಅವರು ಸಹ ಉತ್ತಮ ಶಿಕ್ಷಣ ಪಡೆದು ಸತ್ಪçಜೆಗಳಾಗಿ ಹೊರ ಹೊಮ್ಮಲಿದ್ದಾರೆ ಎಂದರು.
Lingayat and Veerashaiva Thinkers’ Forum ಇದೇ ಸಂದರ್ಭದಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆ ವತಿಯಿಂದ ಶಾಲೆಗೆ ೫೦ ಚದಾರ್ ವಿತರಿಸಿ, ಮಕ್ಕಳಿಗೆ ಸಿಹಿ ನೀಡಲಾಯಿತು.
ಪ್ರಮುಖರಾದ ಎಚ್. ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಸುನೀಲ್ ಕುಮಾರ್, ಸಹಾಯಕ ವ್ಯವಸ್ಥಾಪಕ ಜಿ. ನವೀನ್, ಹಿರಿಯ ಅಧಿಕಾರಿ ಕಿರಣ್ ಕುಮಾರ್, ಲಯನ್ಸ್ ಕ್ಲಬ್ ಉಪಾಧ್ಯಕ್ಷ ಎಸ್. ಕೃಷ್ಣಾನಂದ್, ಶಾಲೆಯ ಕಾರ್ಯದರ್ಶಿ ಜಿ.ಬಿ. ರಾಮಪ್ಪ, ನಿವೃತ್ತ ಶಿಕ್ಷಕ ಮೋಹನ್ ದಾಸ್, ಅಶೋಕ ತವನಂದಿ, ಹಿರಿಯ ಶಿಕ್ಷಕ ಕೆ.ಬಿ. ಪುಟ್ಟರಾಜ, ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಇತರರಿದ್ದರು.