Monday, November 25, 2024
Monday, November 25, 2024

Kuvempu University ಕುವೆಂಪು ವಿವಿಯ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ- ಸಚಿವ ಮಧು ಬಂಗಾರಪ್ಪ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿ ಹಣಕಾಸು ವಿಷಯದಲ್ಲಿ ಸಂಕಷ್ಟದಲ್ಲಿದ್ದು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಆಡಳಿತವನ್ನು ವಿವಿ ನಿಯಮಾವಳಿ ಪ್ರಕಾರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು. ತ್ವರಿತ ವಾಗಿ ಕೈಗೊಳ್ಳಬೇಕಾದ ಹಣಕಾಸು ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು.‌ ಏನೇ ಸಮಸ್ಯೆ ಇದ್ದರೂ ನನ್ನನ್ನು ಕರೆಯಿರಿ. ವಿವಿ ಅಭಿವೃದ್ದಿಯಲ್ಲಿ ನಾವೆಲ್ಲ ಭಾಗಿಯಾಗೋಣ ಎಂದು ಮನವಿ ಮಾಡಿದರು.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಮಾತನಾಡಿ, ವಿವಿ‌ಸಂಪೂರ್ಣವಾಗಿ ಸರ್ಕಾರಿ ಹಣದ ಮೇಲೇ ಅವಲಂಬಿಸದೆ ಸಕ್ರಿಯರಾಗಿ ಸಿಎಸ್ ಆರ್ ನಿಧಿ ಹಾಗೂ ಇತರೆ ಚಟುವಟಿಕೆ ಮೂಲಕ ಅಭಿವೃದ್ಧಿ ಗೆ ಶ್ರಮಿಸಲಾಗುವುದು.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ವಿವಿ ವ್ಯಾಪ್ತಿಗೆ ಬರುತ್ತದೆ. ಪ್ರಥಮ ದರ್ಜೆ ಕಾಲೇಜುಗಳ ಅಫಿಲಿಯೇಷನ್ ಗಾಗಿ ಸರ್ಕಾರಕ್ಕೆ ಅರ್ಜಿ ೩೫ ಪ್ರಸ್ತಾವನೆ ಕಳುಹಿಸಿದ್ದೆವು. ಅಫಿಲಿಯೇಷನ್ ದೊರಕದೆ ಕಾಲೇಜು ಆರಂಭಿಸಲು ಸಾಧ್ಯವಿಲ್ಲ.೧೭ ಸರ್ಕಾರಿ ಕಾಲೇಜು ಅನುಮೋದನೆ ಆಗಿದೆ. ೧೮ ಕಾಲೇಜು ಅನುಮೋದನೆಯಾಗದ ಕಾರಣ ದಾಖಲಾತಿ ಸಾಧ್ಯವಾಗುತ್ತಿಲ್ಲ ವೆಂದರು.

ಫಲಿತಾಂಶ ಬೇಗ ನೀಡಲು ಸ್ವಲ್ಪ ತೊಡಕು ಇದೆ.‌ ಯುಯುಸಿಎಂಎಸ್ ಸೆಂಟ್ರಲೈಸ್ಡ್ ಸಾಫ್ಟ್ವೇರ್ ನಿಂದ ಸಣ್ಣಪುಟ್ಟ ಬದಲಾವಣೆ ಕೂಡ ಅತ್ಯಂತ ಕಷ್ಟ ಆಗುತ್ತಿದೆ. ೩ ವರ್ಷದಿಂದ ಸ್ನಾತಕೋತ್ತರ ಪದವಿ ಅಂಕಪಟ್ಟಿ ಸಹ ಬಂದಿಲ್ಲ . ವಿಕೇಂದ್ರೀಕರಣ ಆದರೆ ಅನುಕೂಲವಾಗುತ್ತದೆ. ಯುಯುಸಿಎಂಎಸ್ ಪೋರ್ಟಲ್ ನಲ್ಲಿ ದಾಖಲಾತಿ ಹಾಗೂ ಅಂಕಪಟ್ಟಿ ಪಡೆಯುವಲ್ಲಿ ಅನೇಕ ತೊಂದರೆಗಳಿವೆ. ಪಿಯು ಫಲಿತಾಂಶ ಬಂದು 4 ತಿಂಗಳಾದರೂ ದಾಖಲಾತಿ ಸಾಧ್ಯವಾಗಿಲ್ಲ ಎಂದರು.
ಪ್ರಾಧ್ಯಾಪಕರು ಮಾತನಾಡಿ, ಅಫಿಲಿಯೇಷನ್ ದೊರಕದ ಪ್ರಥಮ ದರ್ಜೆ ಕಾಲೇಜುಗಳಿಗೆ ದಾಖಲಾತಿ ಆಗುತ್ತಿಲ್ಲ. ಹಾಗೂ ಸರ್ಕಾರದ ಕೆಲವು ನೀತಿಗಳಿಂದಾಗಿ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣ ನಿಲ್ಲಿಸಲಾಗಿದ್ದು ವಿದ್ಯಾರ್ಥಿಗಳು ಮತ್ತು ವಿವಿ ಗೆ ಹಿನ್ನಡೆಯಾಗಿದೆ ಎಂದರು.

Kuvempu University ಸಿಂಡಿಕೇಟ್ ಸದಸ್ಯರಾದ ಶ್ರೀಪಾಲ್ ಮತ್ತು ಇತರೆ ಪ್ರಾಧ್ಯಾಪಕರು, ಕರ್ನಾಟಕ ಮತ್ತು‌ ಮಹಾರಾಷ್ಟ್ರದಲ್ಲಿ‌ ಮಾತ್ರ ಈ ಸೆಂಟ್ರಲೈಸ್ಡ್ ಪೋರ್ಟಲ್ ಇದ್ದು, ರಾಜ್ಯಾದ್ಯಂತ ವಿವಿ ಗಳಲ್ಲಿ ಈ ಸಮಸ್ಯೆಗಳಿವೆ ಎಂದು ತಿಳಿಸಿದರು.

ಸಚಿವರು, ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳು ಗಂಭೀರವಾಗಿದ್ದು, ಸಮಸ್ಯೆಗಳ ಪಟ್ಟಿ ನೀಡಿ ಈ ವಿಷಯವಾಗಿ ಆದ್ಯತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಮಾತನಾಡುತ್ತೇನೆ.

ಹಂತ ಹಂತವಾಗಿ ವಿವಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೂ ನಾನು‌ ಈ ಸಮಸ್ಯೆಗಳ ಬಗ್ಗೆ ತಿಳಿಸುತ್ತೇನೆ ಎಂದರು.ಈ ತಿಂಗಳ ಅಂತ್ಯದೊಳಗೆ ಮತ್ತೊಂದು ಸಭೆ ನಡೆಸೋಣ ಎಂದರು.

ಹೊರಗುತ್ತಿಗೆ ನೌಕರರಿಗೆ ವೇತನ‌ ನೀಡುವುದು ವಿಳಂಬವಾಗುತ್ತಿದ್ದು, ನಿಗದಿತ ಸಮಯದೊಳಗೆ ವೇತನ ನೀಡಬೇಕೆಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...

Constitution Day ನವೆಂಬರ್ 26.”ಸಂವಿಧಾನ ದಿನ” .ಫ್ರೀಡಂ ಪಾರ್ಕಿನಲ್ಲಿ ವಿಶೇಷ ಕಾರ್ಯಕ್ರಮ

Constitution Day ನ. 26 ರಂದು 'ಸಂವಿಧಾನ ದಿನಾಚರಣೆ' ಪ್ರಯುಕ್ತ ಭಾರತ...

Shivamogga police ವಿಷ ಸೇವಿಸಿ ಮೃತಪಟ್ಟ ಅಪರಿಚಿತ ವ್ಯಕ್ತಿ.ಪೊಲೀಸ್ ಪ್ರಕಟಣೆ

Shivamogga police ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ನಿಲ್ದಾಣದ...