Keladi Shivappa Nayaka Agriculture and Horticulture University ರೋಗ ಬಾಧಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗದ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು. ಮರಗಳ ಉತ್ತಮ ಬೆಳವಣಿಗೆಗೆ ಕೊಟ್ಟಿಗೆ ಗೊಬ್ಬರದ ಜೊತೆಗೆ ಶಿಫಾರಿತ ಪ್ರಮಾಣದ ಪೋಷಕಾಂಶಗಳನ್ನು ಸಾರಜನಕ:ರಂಜಕ:ಪ್ರೆಟ್ಯಾಷ್ (100:40:140 ಗ್ರಾಂ ಪ್ರತಿ ಮರಕ್ಕೆ) ನೀಡಬೇಕು. ಶೇ. 1ರ ಬೋರ್ಡೋ ದ್ರಾವಣ ಅಥವಾ ಶೇ. 0.3ರ ತಾಮ್ರದ ಆಕ್ಸಿಕ್ಲೋರೈಡ್ ಶಿಲೀಂಧ್ರನಾಶಕಗಳನ್ನು ಒಂದು ಮಿ.ಲೀ. ಅಂಟು ದ್ರಾವಣ ಜೊತೆ ಬೆರೆಸಿ ಎಲೆಗಳಿಗೆ ಸಿಂಪಡಿಸುವುದು. ರೋಗ ಲಕ್ಷಣದ ಪ್ರಾರಂಭದಲ್ಲಿ ಮುಂಜಾಗ್ರತಾ ಕ್ರಮವಾಗಿ Keladi Shivappa Nayaka Agriculture and Horticulture University ಶಿಲೀಂಧ್ರನಾಶಕಗಳಾದ ಮ್ಯಾಂಕೋಜೆಬ್ (2.5 ಗ್ರಾಂ) ಅಥವಾ ಮ್ಯಾಂಕೋಜೆ಼಼ಬ್ ಶೇ. 63+ಕಾರ್ಬೆನ್‌ಡೈಜೀಮ್ ಶೇ. 12, 2.5 ಗ್ರಾಂ ಜೊತೆಗೆ ಅಂಟು ದ್ರಾವಣ (1 ಮಿ.ಲೀ.) ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಹೆಕ್ಸಾಕೊನಜೋಲ್ ಶೇ. 5 ಎಸ್.ಸಿ/ಇ.ಸಿ ಅಥವಾ ಪ್ರೊಪಿಕೊನಜೋಲ್ ಶೇ. 25 ಇ.ಸಿ ಅಥವಾ ಟೆಬುಕೊನಜೋಲ್ ಶೇ. 39.38 ಎಸ್.ಸಿ ಅಂತರವ್ಯಾಪಿ ಶಿಲೀಂಧ್ರನಾಶಕಗಳನ್ನು 1 ಮಿ.ಲೀ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ರೋಗದ ಬಾಧೆಯು ಅಂತರ ಬೆಳೆಯಾದ ಕಾಳುಮೆಣಸು ಬೆಳೆಗೂ ಸಹ ಹರಡುವುದರಿಂದ ಇವುಗಳಿಗೂ ಸಹ ಸಿಂಪರಣೆ ಮಾಡಬೇಕು. ರೋಗ ಮತ್ತೆ ಕಾಣಿಸಿಕೊಂಡಲ್ಲಿ ಮೇಲೆ ತಿಳಿಸಿದ ಯಾವುದಾದರೊಂದು ಶಿಲೀಂಧ್ರ ನಾಶಕಗಳನ್ನು 20-25 ದಿನಗಳ ಅಂತರದಲ್ಲಿ ಸಿಂಪರಣೆಯನ್ನು ಪುನರಾವರ್ತಿಸಬೇಕು.ಸಾಮೂಹಿಕ ಹಂತದಲ್ಲಿ ಸಿಂಪರಣಾ ಕಾರ್ಯವನ್ನು ಕೈಗೊಳ್ಳುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ತಿಳಿಸಿದೆ.
Keladi Shivappa Nayaka Agriculture and Horticulture University ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ನಿರ್ವಹಣೆ ಬಗ್ಗೆ ಕೃಷಿ ವಿವಿ ಯ ಪ್ರಕಟಣಾ ಮಾಹಿತಿ
Date: