Friday, April 10, 2026
Friday, April 10, 2026

ಹೊಸ ತಂತ್ರಾಂಶ ವಿಜ್ಞಾನಕ್ಕೆ ಹೊಸ ಪೀಳಿಗೆ ಹೊಂದಿಕೊಳ್ಳಬೇಕು

Date:

ಓಬಿರಾಯನ ಕಳೆದ ಮೆಕಾಲೆ ಶಿಕ್ಷಣ ನೀತಿಯನ್ನು ಆದರಿಸಿ ಇಂದಿನ ಬದುಕಿನ ಸವಾಲುಗಳನ್ನು ಎದುರಿಸಲು ಸಾಧ್ಯವಿಲ್ಲ. ಕಲಿಯುವ ವಿದ್ಯೆ ಹಾಗೂ ಬಳಕೆಯಾಗುವ ವಿದ್ಯೆ ನಡುವೆ ವ್ಯತ್ಯಾಸವಿದೆ. ಇವುಗಳ ನಡುವೆ ಸಮತೋಲನ ತರುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

ಬೆಳಗಾವಿಯ ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ 126 ಎಕರೆ ಪ್ರದೇಶದಲ್ಲಿ ನಿರ್ಮಿಸುತ್ತಿರುವ, ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತಿದ್ದರು.

“ಇಂದು ಜ್ಞಾನಾರ್ಜನೆ ವಿಚಾರದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತಿವೆ. ತಂತ್ರಾಂಶ ವಿಜ್ಞಾನಕ್ಕೆ ಜಗತ್ತು ಬದಲಾಗಿದೆ. ಮುಂದಿನ ಪೀಳಿಗೆ ಇಂತಹ ಬದಲಾವಣೆಗಳಿಗೆ ಹೊಂದಿಕೊಳ್ಳಲು ಹೊಸ ಶಿಕ್ಷಣ ನೀತಿ ಸಹಾಯಕವಾಗಿದೆ. ವಿಶ್ವವಿದ್ಯಾಲಯಗಳು ಶೈಕ್ಷಣಿಕವಾಗಿ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಜಗತ್ತಿನ ಶಕ್ತಿ ಜ್ಞಾನದ ಕಡೆಗೆ ವಾಲುತ್ತಿದೆ. ವಿವಿಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಬೊಮ್ಮಾಯಿ ಅವರು ಸಲಹೆ ನೀಡಿದರು.

“ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ. ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ. ಈ ಭಾಗದ ಸವಾಲು ಹಾಗೂ ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ನಿವಾರಣೆಗಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸಬೇಕು. ಸೂಪರ್ 30 ಯೋಜನೆ ಮೂಲಕ ಮುಂದಿನ ಬಂದು ವರ್ಷದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಭರವಸೆ ನೀಡಿದರು.

ಈ ವೇಳೆಯಲ್ಲಿ ಮಾತನಾಡಿದ ಮುಜರಾಯಿ, ಹಜ್ ಮತ್ತು ವಕ್ಛ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಹಾಗೂ ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಪರಿಷತ್ ಸದಸ್ಯರಾದ ಅರುಣ್ ಶಹಾಪುರ, ಡಾ. ಸಾಬಣ್ಣ ತಳವಾರ, ಸಿಂಡಿಕೇಟ್ ಸದಸ್ಯರು , ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...