Sunday, December 7, 2025
Sunday, December 7, 2025

Karnataka Public Service Commission ಗ್ರೂಪ್ ‘ ಬಿ’ ವೃಂದದ ಸ್ಪರ್ಧಾತ್ಮಕ ಪರೀಕ್ಷೆಗಳ ವ್ಯವಸ್ಥೆಗೆ ಸೂಚನೆ

Date:

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಶಿವಮೊಗ್ಗ ನಗರದಲ್ಲಿ ಸೆ.14 ಮತ್ತು 15 ರಂದು ನಡೆಯಲಿರುವ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಶಾಂತಿಯುತವಾಗಿ, ಪಾರದರ್ಶಕವಾಗಿ ಮತ್ತು ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪ್ರದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ಕಾರ್ಯದರ್ಶಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕೆ ಅಧಿಕಾರಿಗಳೊಂದಿಗೆ ಪರೀಕ್ಷೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿವಮೊಗ್ಗ ನಗರದ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಸೆ.14 ರಂದು ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ, ಸೆ.15 ರಂದು ಬೆಳಿಗ್ಗೆ 10 ಗಂಟೆಯಿAದ 11.30 ರವರೆಗೆ ಕನ್ನಡ ಭಾಷಾ ಪರೀಕ್ಷೆ ಪತ್ರಿಕೆ-1, ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಪತ್ರಿಕೆ ಪರೀಕ್ಷೆ ನಡಯಲಿದೆ. ಸೆ.14 ರಂದು 7066 ಅಭ್ಯರ್ಥಿಗಳು, ಸೆ.15 ರ ಬೆಳಗಿನ ಪರೀಕ್ಷೆಯಲ್ಲಿ 8993 ಮತ್ತು ಮಧ್ಯಾಹ್ನದ ಪರೀಕ್ಷೆಯಲ್ಲಿ 8354 ಅಭ್ಯರ್ಥಿಗಳು ಹಾಗೂ 12 ವಿಶೇಷಚೇತನರು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈಗಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಪರಿವೀಕ್ಷಕರು ಸೇರಿದಂತೆ ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಿ, ಅನುಸರಿಸಬೇಕಾದ ಪರೀಕ್ಷಾ ಸೂಚನೆಗಳ ಕುರಿತು ತರಬೇತಿ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ನಿಗದಿತ ವೇಳೆಯೊಳಗೆ ಅಭ್ಯರ್ಥಿಗಳ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ ಕುರಿತು ಅಭ್ಯರ್ಥಿಗಳಿಗೆ ತಿಳಿಸಬೇಕು. ಹಾಗೂ ಎಲ್ಲ ಕೇಂದ್ರಗಳಲ್ಲಿ ಜ್ಯಾಮರ್ ಮತ್ತು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.
ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಮೆಸ್ಕಾಂ ಶಿವಮೊಗ್ಗರವರಿಗೆ ಕೋರಲಾಗಿದೆ. ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಹಾಗೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಕ್ರತಾ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಕೊರಲಾಗಿದೆ.
Karnataka Public Service Commission ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸುವರು ಎಂದು ತಿಳಿಸಿದರು.
ಸಭೆಯಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳ ಕರ್ತವ್ಯಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲಾಯಿತು. ಹಾಗೂ ಪರೀಕ್ಷೆಗಳು ಯಾವುದೇ ರೀತಿಯ ಗೊಂದಲವಿಲ್ಲದೆ, ಪಾರದರ್ಶಕವಾಗಿ, ಯಶಸ್ವಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...