Saturday, March 15, 2025
Saturday, March 15, 2025

ಒಮಿಕ್ರಾನ್ ಗಡಿಭಾಗ: ಕಟ್ಟುನಿಟ್ಟು ಕ್ರಮ

Date:

ಓಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ರಾಜ್ಯದ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ರಾಜ್ಯದ ಗಡಿ ಪ್ರವೇಶಿಸುವ ಪ್ರತಿಯೊಬ್ಬರು ನಿರೋಧಕ ಲಸಿಕೆಗಳನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಸರ್ಕಾರ ನಿರ್ಬಂಧನೆ ಹೇರಿದೆ. ಆದರೆ ಲಸಿಕೆ ಪಡೆಯುವ ಮೊದಲೇ ಸರ್ಟಿಫಿಕೇಟ್ ಜನರೇಟ್ ಆಗುತ್ತಿರುವುದರಿಂದ ಎರಡನೇ ಡೋಸ್ ಪಡೆಯದಿದ್ದರೂ ಅಡ್ಡಾಡಬಹುದಾಗಿದೆ. ಇದರಿಂದ ಎರಡನೇ ಡೋಸ್ ಪಡೆಯುವವರೆಗೂ ತೊಂದರೆ ಎದುರಾಗಿದೆ.

ಮಹಾರಾಷ್ಟ್ರ, ಕೇರಳ ಗಡಿಯಿಂದ ಬರುವ ಜನರಿಗೆ ವರದಿ ಕಡ್ಡಾಯ ಮಾಡಲಾಗಿದೆ. ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನಿಯಂತ್ರಣ ಲಸಿಕೆಯ ಎರಡು ಡೋಸ್ ಪಡೆದ ಸರ್ಟಿಫಿಕೇಟ್ ಇರಲೇಬೇಕು.

ರಾಜ್ಯದಲ್ಲಿ ಈವರೆಗೆ 18 ವರ್ಷ ಮೇಲ್ಪಟ್ಟ 4.89 ಕೋಟಿ ಜನರನ್ನು ಗುರುತಿಸಲಾಗಿದೆ. ಅದರಲ್ಲಿ 4.70 ಕೋಟಿ ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಸೇತು ತಂತ್ರಾಂಶದಲ್ಲಿ 2 ಡೋಸ್ ಲಸಿಕೆ ಪಡೆಯಲಾಗಿದೆ ಎಂಬ ಮಾಹಿತಿ ತೋರಿಸಿದ್ದರಿಂದ ಮತ್ತೆ ಅವರಿಗೆ ಲಸಿಕೆಯನ್ನು ತಂತ್ರಾಂಶದಲ್ಲಿ ಅವಕಾಶ ಇಲ್ಲ ಇದರಿಂದ ಜನರು ತೊಂದರೆಗೊಳಗಾಗಿದ್ದಾರೆ. ಕೆಲವರು ಅಧಿಕಾರಿಗಳ ಬೆನ್ನುಬಿದ್ದು ತಾಂತ್ರಿಕ ಸಮಸ್ಯೆ ಸರಿ ಮಾಡಿಸಿಕೊಂಡು ಲಸಿಕೆ ಪಡೆಯುತ್ತಿದ್ದರೆ, ಲಸಿಕೆಯ ಭಯ ಇದ್ದವರು ಮತ್ತೊಮ್ಮೆ ಲಸಿಕೆ ಪಡೆಯುವ ಸಾಹಸವೇ ಮಾಡುತ್ತಿಲ್ಲ ಎಂದು ತಿಳಿದುಬಂದಿದೆ.

‘ಲಸಿಕೆ ನೀಡುವ ಮೊದಲೇ 2 ಡೋಸ್ ಪಡೆದ ಸರ್ಟಿಫಿಕೇಟ್ ಜನರೇಟ್ ಆಗುತ್ತಿದೆ. ಇದರಿಂದ ಎರಡನೇ ಡೋಸ್ ವಿತರಣೆ ಸಮಸ್ಯೆ ಆಗಿದೆ. ಕೆಲ ವೈದ್ಯರಿಗೂ ಇದೇ ರೀತಿ ಆಗಿತ್ತು. ಕೊನೆಗೆ ತಾಂತ್ರಿಕ ಸಿಬ್ಬಂದಿ ಕಸರತ್ತು ಮಾಡಿ ಎರಡನೇ ಡೋಸ್ ಕೊಡಿಸಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಸೇತು ಭಾಗಕ್ಕೂ ತಿಳಿಸಲಾಗಿದೆ. ಸಮಸ್ಯೆ ನಿಭಾಯಿಸುವುದೇ ಕಷ್ಟವಾಗುತ್ತಿದೆ’ ಎಂದು ಕಾರವಾರ ಡಿ.ಹೆಚ್.ಒ ಶರದ ನಾಯಕ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...